ದಾವಣಗೆರೆ, ಆ. 4- ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳನ್ನು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಹಾಗೂ ವೈಯಕ್ತಿಕ ವಾಗಿ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಬೀಳ್ಕೊಟ್ಟರು.
ಉತ್ತರ ಸಂಚಾರ ಪೊಲೀಸ್ ಠಾಣೆಯ ಪಿ.ಎಸ್.ಐ. ಜಯಪ್ರಕಾಶ್, ಎ.ಎಸ್.ಐ. ಅಬ್ದುಲ್ ಸತ್ತಾರ್, ಡಿಎಆರ್ ಘಟಕದ ಎ.ಆರ್.ಎಸ್.ಐ. ಚಂದ್ರಶೇಖರ್, ಮಲೇಬೆನ್ನೂರು ಪೊಲೀಸ್ ಠಾಣೆಯ ಎ.ಎಸ್.ಐ. ಎಸ್. ಮಲ್ಲಿಕಾರ್ಜುನ ಅವರನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ನಿವೃತ್ತಿ ಜೀವನಕ್ಕೆ ಅಭಿನಂದಿಸಿ, ಸನ್ಮಾನಿಸಿ ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ಕಛೇರಿ ಎಎಓ ಮೆಹಬೂಬ್ ಎ., ಶಾಖಾಧೀಕ್ಷಕರಾದ ಶ್ರೀಮತಿ ವೀಣಾ ಹಾಗೂ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಹಾಗೂ ನಿವೃತ್ತಿ ಹೊಂದಿದ ಅಧಿಕಾರಿಗಳ ಕುಟುಂಬ ವರ್ಗದವರು ಉಪಸ್ಥಿತರಿದ್ದರು.