ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ವರ್ತನೆ ವಿರುದ್ಧ ದಾವಣಗೆರೆಯಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಶೋಷಿತ ಸಮುದಾಯಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಹಿರಿಯ ವಕೀಲ ಲೋಕಿಕೆರೆ ಸಿದ್ದಪ್ಪ ತಿಳಿಸಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜ್ಯಪಾಲರ ಮೂಲಕ ಶೋಕಾಸ್ ನೋಟೀಸ್ ಜಾರಿ ಮಾಡಿ ಸರ್ಕಾರವನ್ನು ಅಸ್ಥಿರಗೊಳಿಸುವುದರ ಮೂಲಕ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಹುನ್ನಾರ ನಡೆಸುತ್ತಿವೆ. ಇದರ ವಿರುದ್ಧವಾಗಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನೆ ಪ್ರಾರಂಭ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.