ದಾವಣಗೆರೆ,ಆ.5- ನಗರದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರಕ್ತ ನಿಧಿ ಕೇಂದ್ರದ ಸಂಯೋಜಕ ಎನ್.ಜಿ ಶಿವಕುಮಾರ್ ಅವರಿಗೆ ಬೆಂಗಳೂರಿನ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಕನ್ನಡಾಂಬೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ `ಸಮಾಜ ಸೇವಾ ರತ್ನ’ ರಾಷ್ಟ್ರ ಪ್ರಶಸ್ತಿಯನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.
ಶಿವಕುಮಾರ್ಗೆ `ಸೇವಾ ರತ್ನ’ ಪ್ರಶಸ್ತಿ
