ದಾವಣಗೆರೆ, ಆ. 5 – ಖಾಸಗಿ ಶಾಲೆಗಳ ಪೈಪೋಟಿ ಎದುರಿಸಲು ಸರ್ಕಾರಿ ಶಾಲೆಗಳಲ್ಲಿ ಸೌಲಭ್ಯ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸ ಬೇಕು. ಈ ನಿಟ್ಟಿನಲ್ಲಿ ಸರ್ಕಾರದ ಜೊತೆಗೆ ಶಿಕ್ಷಕರು ಹಾಗೂ ಸಾರ್ವಜನಿಕರೂ ಕೈಜೋಡಿಸಲು ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ನ ಕಾರ್ಯ ದರ್ಶಿ ಕೆ.ರಾಘವೇಂದ್ರ ನಾಯರಿ ಕರೆ ನೀಡಿದರು.
ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿ ಯನ್ನ `ಸಾಮಾಜಿಕ ಕಳಕಳಿ’ ಕಾರ್ಯಕ್ರಮದಡಿ ಬ್ಯಾಂಕ್ ರಾಷ್ಟ್ರೀಕರಣದ 56ನೇ ದಿನಾಚರಣೆಯ ಅಂಗವಾಗಿ ದಾವಣಗೆರೆ ತಾಲ್ಲೂಕಿನ ತುರ್ಚಘಟ್ಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಪುಟಾಣಿಗಳು ಕುಳಿತುಕೊಳ್ಳುವ ಕುರ್ಚಿಗಳನ್ನು ಕೊಡುಗೆಯಾಗಿ ನೀಡಿ ಅವರು ಮಾತನಾಡಿದರು.
ಸರ್ಕಾರಿ ಕನ್ನಡ ಶಾಲೆಗಳು ನಮ್ಮ ನಾಡಿನ ಹೆಮ್ಮೆ. ಅವುಗಳಲ್ಲಿ ಕಲಿತವರು ಅದೆಷ್ಟೋ ವಿದ್ಯಾ ರ್ಥಿಗಳು ವಿಜ್ಞಾನ, ತಂತ್ರಜ್ಞಾನ, ಸಂಶೋಧನೆ, ಕಲೆ ಮುಂತಾದ ಅನೇಕ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮೆರೆದಿದ್ದಾರೆ. ಆದ್ದರಿಂದ ಖಾಸಗಿ ಶಾಲೆಗಳಿಗೆ ಅನಗತ್ಯ ಪ್ರೋತ್ಸಾಹ ನೀಡುವುದನ್ನು ಬಿಟ್ಟು ಸರ್ಕಾರಿ ಶಾಲೆಗಳನ್ನು ಸಬಲೀಕರಣ ಮಾಡಲು ಸರ್ಕಾರ ಮುಂದಾಗಬೇಕು ಎಂದು ನಾಯರಿ ಆಶಯ ವ್ಯಕ್ತಪಡಿಸಿದರು.
ಕೆನರಾ ಬ್ಯಾಂಕ್ ನಿವೃತ್ತ ನೌಕರರ ಸಂಘದ ಪ್ರಾದೇಶಿಕ ಕಾರ್ಯದರ್ಶಿ ಹೆಚ್.ಸೂಗೂರಪ್ಪ ಮಾತ ನಾಡಿ, ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಬೇಕು. ದುಃಸ್ಥಿತಿಯಲ್ಲಿ ರುವ ಸರ್ಕಾರಿ ಕನ್ನಡ ಶಾಲೆಗಳನ್ನು ಸರ್ಕಾರವು ಆದ್ಯತೆ ಮೇರೆಗೆ ಅಭಿವೃದ್ಧಿಪಡಿಸಬೇಕು ಎಂದರು. ಶಾಲೆಯ ಮುಖ್ಯ ಶಿಕ್ಷಕಿ ಕಲ್ಪನಾ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ನೌಕರರ ಸಂಘದ ರಾಜ್ಯ ಸಮಿತಿ ಸದಸ್ಯರುಗಳಾದ ಕೆ.ವಿಶ್ವನಾಥ್ ಬಿಲ್ಲವ, ಆರ್.ಆಂಜನೇಯ, ಸಿ.ಪರಶುರಾಮ, ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಕಾರ್ಯದರ್ಶಿ ಹೆಚ್.ಎಸ್.ತಿಪ್ಪೇಸ್ವಾಮಿ, ಮಾಜಿ ಅಧ್ಯಕ್ಷ ಅಜಿತ್ ಕುಮಾರ್ ನ್ಯಾಮತಿ, ಜಂಟಿ ಕಾರ್ಯದರ್ಶಿ ಅಣ್ಣಪ್ಪ ನಂದಾ, ಕೆನರಾ ಬ್ಯಾಂಕ್ ನೌಕರರ ಸಂಘದ ಚಾಂದ್ ಬಾಷಾ, ಡಿ.ಹರ್ಷದ್, ನಾಗರತ್ನಮ್ಮ, ಎಂ.ಆರ್. ಪವನ್, ಪವನ್ ಕುಮಾರ್, ಅಶ್ವಿನಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನಾಗರಾಜ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹನುಮಂತಪ್ಪ ಹಾಗೂ ಶಾಲೆಯ ಶಿಕ್ಷಕರಾದ ವಿ.ಎಂ.ವಿರುಪಾಕ್ಷಯ್ಯ, ಕೆ.ವೀಣಾ, ಎನ್.ಸಿ.ಸುಮಿತ್ರಾ, ಆಶಾರಾಣಿ, ಕಾವ್ಯ, ಮಂಜಮ್ಮ ಕೊಟ್ಟಿಗಿ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.