ದಾವಣಗೆರೆ, ಆ.5- ನಗರದ ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2024-25ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ರೆಡ್ ಕ್ರಾಸ್, ರೇಂಜರ್ಸ್ ಮತ್ತು ಎನ್ನೆಸ್ಸೆಸ್ ಚಟುವಟಿಕೆಗಳ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು. ಈ ವೇಳೆ ಕಾಲೇಜಿನ ಪ್ರಾಚಾರ್ಯ ಟಿ.ಎ. ಕುಸಗಟ್ಟಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಜಿ. ಕರಿಸಿದ್ದಪ್ಪ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಜಿ. ಶಿವಕುಮಾರ್, ಮಾಜಿ ಮೇಯರ್ ಎಸ್.ಟಿ ವೀರೇಶ್ ಮತ್ತಿತರರಿದ್ದರು.
ಸೀತಮ್ಮ ಕಾಲೇಜಿನಲ್ಲಿ ಎನ್ನೆಸ್ಸೆಸ್ ಚಟುವಟಿಕೆಗಳ ಉದ್ಘಾಟನೆ
