ಹರಿಹರ,ಅ.5-ಇಲ್ಲಿನ ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸರ್ಕಾರ ಮೀಸಲಾತಿ ಘೋಷಣೆ ಮಾಡಿದ್ದು, ಅಧ್ಯಕ್ಷ ಸ್ಥಾನಕ್ಕೆ ಎಸ್ಟಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ನಿಗದಿ ಮಾಡಿದೆ.
ಅದರಂತೆ ನಗರದ 31 ನೇ ವಾರ್ಡಿನ ಜೆಡಿಎಸ್ ಸದಸ್ಯರಾದ ಕವಿತಾ ಮಾರುತಿ ಬೇಡರ್ ಅವರು ಮಾತ್ರ ಎಸ್ಟಿ ಮಹಿಳಾ ಮೀಸಲು ಕ್ಷೇತ್ರದಿಂದ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಅವರು ನಗರಸಭೆ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.