ದಾವಣಗೆರೆ, ಆ.6- ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನದ ಅಂಗವಾಗಿ ಆಚರಿಸುವ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ಶಿವಯೋಗಿ ಗಳ ಭಾವಚಿತ್ರಕ್ಕೆ ಅಧಿಕಾರಿಗಳು ಪುಷ್ಪ ನಮನ ಸಲ್ಲಿಸಿದರು.
ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಗ್ರಾಮ ಸ್ವರಾಜ್ ಅಭಿಯಾನದ ಆವರಗೆರೆ ರುದ್ರಮುನಿ, ಗ್ರಾಮ ಸೇವಾ ಶ್ರಮ ಸಂಚಾಲಕ ಕಡ್ಲೆಬಾಳು ಪ್ರಕಾಶ್, ಕಸ್ತೂರಬಾ ಗಾಂಧಿ ಸಮಾಜದ ಮಹಿಳಾ ಸಂಚಾ ಲಕಿ ಆರ್. ಉಷಾರಾಣಿ, ಹಿರಿಯ ಸಹಾಯಕ ನಿರ್ದೇಶಕ ಧನಂಜಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳಿದ್ದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಮದ್ಯಪಾನ ಸಂಯಮ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.