ಹರಿಹರ, ಆ. 19- ನಗರದ ಶ್ರೀ ಮಾರ್ಕಂಡೇಶ್ವರ ಸ್ವಾಮಿಯ ಪಲ್ಲಕ್ಕಿ ಉತ್ಸವ ಸಡಗರ, ಸಂಭ್ರಮದಿಂದ ಮತ್ತು ಶ್ರದ್ಧಾ ಭಕ್ತಿಯಿಂದ ನಡೆಯಿತು.
ನಗರದ ಮೆಟ್ಟಿಲು ಹೊಳೆ ರಸ್ತೆಯಲ್ಲಿರುವ ಶ್ರೀ ಮಾರ್ಕಂಡೇಶ್ವರ ಸ್ವಾಮಿ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ ಟಿ.ಬಿ. ರಸ್ತೆ, ಹಳೆ.ಪಿ.ಬಿ. ರಸ್ತೆ, ಗಾಂಧಿ ವೃತ್ತ, ಮುಖ್ಯ ರಸ್ತೆ, ರಾಣಿ ಚೆನ್ನಮ್ಮ ವೃತ್ತ, ದೇವಸ್ಥಾನ ರಸ್ತೆಯ ಮೂಲಕ ಸಂಚರಿಸಿ ಪುನಃ ದೇವಸ್ಥಾನಕ್ಕೆ ಅಂತ್ಯಗೊಂಡಿತು.
ಮೆರವಣಿಗೆಯಲ್ಲಿ ಡೊಳ್ಳು, ಪುರವಂತರ ವಡಪುಗಳು, ಸಮಾಳ, ಬ್ಯಾಂಡ್ ಸೆಟ್, ಸೇರಿದಂತೆ, ವಿವಿಧ ಕಲಾ ಮೇಳಗಳು ಮೆರವಣಿಗೆಗೆ ಮೆರಗು ನೀಡಿದವು.