ಜಗಳೂರು, ಆ. 22 – ತಾಲ್ಲೂಕಿನ ಕಣ್ವಕುಪ್ಪೆ ಗ್ರಾಮದ ಶಿಕ್ಷಕ ಆರ್.ಎಸ್.ಓಬಳೇಶ್ ರಾಜ್ಯಮಟ್ಟದ ದೇಹದಾರ್ಢ್ಯತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ತಾಲ್ಲೂಕಿನ ಕಣ್ವಕುಪ್ಪೆ ಗ್ರಾಮದ ಆರ್.ಓ.ಸಣ್ಣ ಸಿದ್ದಪ್ಪ ಅವರ ಪುತ್ರರಾಗಿದ್ದು, ಇತ್ತೀಚೆಗೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಯುವ ಜನ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
January 7, 2025