ಮಲೇಬೆನ್ನೂರು, ಆ. 25- ಮಹರ್ಷಿ ಶ್ರೀ ವಾಲ್ಮೀಕಿ ಅಭಿವೃದ್ದಿ ನಿಗಮಕ್ಕೆ ಹೆಚ್ಚುವರಿ ಅನುದಾನ ನೀಡುವಂತೆ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅವರಿಗೆ ಮನವಿ ಮಾಡಲಾಯಿತು. ಶ್ರೀಗಳ ಮನವಿಗೆ ತಕ್ಷಣ ಸ್ಪಂದಿಸಿದ ಸಿದ್ದರಾಮಯ್ಯ ಅವರು, ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ, ಶಾಸಕರಾದ ಕಂಪ್ಲಿ ಗಣೇಶ್, ಹಂಪಯ್ಯ ಸಾವುಕಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಈಶ್ವರ್, ಮುಖಂಡ ಹೊದಿಗೆರೆ ರಮೇಶ್, ನಿಗಮದ ನಿವೃತ್ತ ಎಂಡಿ ಮೃತ್ಯುಂಜಯಪ್ಪ ಸೇರಿದಂತೆ ಸಮಾಜದ ಎಲ್ಲಾ ಶಾಸಕರು, ಹಿರಿಯ ಅಧಿಕಾರಿಗಳು ಈ ನಿಯೋಗದಲ್ಲಿದ್ದರು.
January 15, 2025