ಮಲೇಬೆನ್ನೂರು, ಆ. 26 – ಇಲ್ಲಿನ ಇಂದಿರಾ ನಗರದಲ್ಲಿರುವ ಗಣೇಶ ದೇವಸ್ಥಾನದಲ್ಲಿ ಯಾದವ ಸಮಾಜದ ಬಂಧುಗಳು ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಿದರು. ಶ್ರೀ ಕೃಷ್ಣನಿಗೆ ವಿಶೇಷ ಪೂಜೆ ಅಭಿಷೇಕ ಸಲ್ಲಿಸಿ ನಂತರ ಎಲ್ಲರಿಗೂ ಪ್ರಸಾದ ವಿತರಣೆ ಮಾಡಿದರು. ಕೃಷ್ಣ ವೇಷಧಾರಿಗಳಾಗಿ ದೇವಸ್ಥಾನಕ್ಕೆ ಆಗಮಿಸಿದ್ದ ಮಕ್ಕಳಿಗೆ ಬಹುಮಾನ ನೀಡಲಾಯಿತು.
January 11, 2025