ನಗರದಲ್ಲಿ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದಿಂದ ರೈತರ ಪ್ರತಿಭಟನೆ
ದಾವಣಗೆರೆ, ಸೆ. 2 – ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಸರ್ಕಾರ ಸಂಪೂರ್ಣ ಉಚಿತವಾಗಿ ವಿದ್ಯುತ್ ನೀಡಬೇಕು. ಅಕ್ರಮ ಸಕ್ರಮ ಯೋಜನೆ ಸರ್ಕಾರ ರದ್ದುಗೊಳಿ ಸಿದ್ದು, ಇದನ್ನು ಮರು ಜಾರಿಗೊಳಿಸಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಹುಚ್ಚ ವ್ವನಹಳ್ಳಿ ಮಂಜುನಾಥ್ ಬಣದಿಂದ ನಗರದಲ್ಲಿ ಇಂದು ರೈತರು ಪ್ರತಿಭಟನೆ ನಡೆಸಿದರು.
ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಕಚೇ ರಿಯ ಮುಂಭಾಗ ಪ್ರತಿಭಟನೆ ನಡೆಸಿದ ರೈತರು ವಿದ್ಯುಚ್ಚಕ್ತಿ ಖಾಸಗೀಕರಣಗೊಳಿಸಬಾರದು, ವಿದ್ಯುತ್ ಪರಿವರ್ತಕ ಸುಟ್ಟ 24 ಗಂಟೆಯೊಳಗೆ ರೈತರಿಗೆ ಹೊಸ ವಿದ್ಯುತ್ ಪರಿವರ್ತಕಗಳನ್ನು ಒದಗಿಸಬೇಕು ಹಾಗೂ ರೈತರ ಪಂಪ್ ಸೆಟ್‌ಗಳಿಗೆ ಆಧಾರ್ ನಂಬರ್ ಜೋಡಣೆ ಮಾಡುವುದನ್ನು ಕಡ್ಡಾಯಗೊಳಿಸಿರುವುದನ್ನು ಸ್ಥಗಿತಗೊಳಿಸಬೇಕು ಎಂಬಿ ತ್ಯಾದಿ ಬೇಡಿಕೆಗಳಿಗೆ ಆಗ್ರಹಿಸಿ ಅಧೀಕ್ಷಕ ಅಭಿಯಂತರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಸಂಘಟನೆಯ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಮಾತನಾಡಿ, ಹಿಂದಿನ ರಾಜ್ಯ ಸರ್ಕಾರದ ಅವಧಿಯಲ್ಲಿ ಪ್ರತಿ ರೈತನಿಗೆ 10 ಹೆಚ್ ಪಿ ವರೆಗೂ ಉಚಿತ ವಿದ್ಯುತ್ ನೀಡಲಾಗು ವುದು, ಉಳಿದ ವಿದ್ಯುತ್ ಬಳಕೆಗೆ ಶುಲ್ಕ ಭರಿಸ ಬೇಕು ಎಂದು ಕಾಯ್ದೆ ಜಾರಿಗೆ ಮಾಡಲಾಗಿತ್ತು. ಅದರ ಭಾಗವಾಗಿ ಅಂದಿನ ಸರ್ಕಾರ ರೈತರ ಎಲ್ಲ ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ಜೋಡಣೆ ಮಾಡುವ ಸಂಚು ರೂಪಿಸಿದ್ದು, ಇದರ ಮುಖ್ಯ ಉದ್ದೇಶ ಒಬ್ಬ ರೈತನಿಗೆ 10 ಹೆಚ್‌ಪಿವರೆಗೂ ಉಚಿತ ವಿದ್ಯುತ್ ನೀಡುವುದು ಹಾಗೂ ಉಳಿದ ವಿದ್ಯುತ್ ಬಳಕೆಗೆ ಶುಲ್ಕ ನಿಗದಿಪಡಿಸುವುದಾಗಿದೆ ಎಂದು ಹರಿಹಾಯ್ದರು.
ಹಿಂದಿನ ಹಲವಾರು ಸರ್ಕಾರಗಳು ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ವಿವಿಧ ರೀತಿಯಲ್ಲಿ ಮೀಟರ್ ಅಳವಡಿಸಲು ಪ್ರಯತ್ನಪಟ್ಟಿದ್ದರೂ ಸಹ ರೈತರು ವಿವಿಧ ಹೋರಾಟಗಳ ಮುಖಾಂ ತರ ಪ್ರತಿರೋಧ ವ್ಯಕ್ತಪಡಿಸಿದ ಪರಿಣಾಮ ಮೀಟರ್ ಅಳವಡಿಸುವ ಕಾರ್ಯದಿಂದ ಹಿಂದೆ ಸರಿಯಲಾಗಿತ್ತು. ಈಗ ಮತ್ತೆ ಮೀಟರ್ ಅಳವಡಿಸು ವ ಮೂಲಕ ರೈತರಿಗೆ ಉಚಿತ ವಿದ್ಯುತ್‌ಗೆ ಶುಲ್ಕ ವಿಧಿಸಲು ಸಂಚು ನಡೆಸುತ್ತಿದೆ ಎಂದು ದೂರಿದರು.
ಕೇಂದ್ರ ಸರ್ಕಾರ ವಿದ್ಯುಚ್ಚಕ್ತಿಯನ್ನು ಖಾಸಗೀಕರಣಗೊಳಿಸುವ ಪ್ರಯತ್ನದಲ್ಲಿದೆ. ಇದರ ಭಾಗವಾಗಿ ಎಲ್ಲಾ ಪಂಪ್‌ಸೆಟ್ ದಾರರಿಗೆ ಮೀಟರ್ ಅಳವಡಿಸಿ ಶುಲ್ಕ ನಿಗದಿ ಮಾಡುವ ಪ್ರಯತ್ನದಲ್ಲಿದೆ. ಯಾವುದೇ ಕಾರಣಕ್ಕೂ ರೈತರು ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸಲು ಅವಕಾಶ ಮಾಡಿಕೊಡುವುದಿಲ್ಲ ಎಂದರು.