ದಾವಣಗೆರೆ, ಸೆ. 3- ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಜೋನಲ್ ಮಟ್ಟದ ಕಬಡ್ಡಿ ಪಂದ್ಯಾವಳಿಯು ನಗರದ ಜಿ.ಎಂ ಫಾರ್ಮಸಿ ಕಾಲೇಜಿನಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಡಾ. ಹೆಚ್.ಡಿ. ಮಹೇಶಪ್ಪ, ಡಾ. ಸುನಿಲ್‌ಕುಮಾರ್ ಹಾಗೂ ವಿವಿಧ ಕಾಲೇಜಿನ ದೈಹಿಕ ನಿರ್ದೇಶಕರು ಭಾಗವಹಿಸಿದ್ದರು.
ಹುಬ್ಬಳ್ಳಿಯ ವಿಘ್ನೇಶ್ವರ ಇನ್‌ಸ್ಟಿಟ್ಯೂಟ್ ಆಪ್ ನರ್ಸಿಂಗ್ ಸೈನ್ಸ್ ಕಾಲೇಜಿನ ಉಮೇಶ್ ನಾಯಕತ್ವದ ತಂಡ ಮೊದಲ ಸ್ಥಾನ ಪಡೆದುಕೊಂಡಿರು.
ಹರಪನಹಳ್ಳಿಯ ಎಸ್‌ಸಿಎಸ್ ಕಾಲೇಜ್ ಆಫ್ ಫಾರ್ಮಸಿ ಸುದೀಪ್ ನಾಯಕತ್ವದ ತಂಡ ದ್ವಿತೀಯ ಸ್ಥಾನ ಹಾಗೂ ಚಳ್ಳಕೆರೆಯ ಬಾಪೂಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಸುರೇಶ್ ನಾಯಕತ್ವದ ತಂಡ ಮೂರನೇ ಸ್ಥಾನ ಮತ್ತು ಜಿ.ಎಂ.ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯೂಟಿಕಲ್ ಸೈನ್ಸ್ ಅಂಡ್ ರಿಸರ್ಚ್‌ನ ಅಭಿಷೇಕ್ ನಾಯಕತ್ವದ ತಂಡ ನಾಲ್ಕನೇ ಸ್ಥಾನ ಪಡೆದುಕೊಂಡಿವೆ.
ಜಿ.ಎಂ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ಗಿರೀಶ್ ಬೋಳಕಟ್ಟಿ, ಕ್ರೀಡಾ ವಿಭಾಗದ ಮುಖ್ಯಸ್ಥ ಮೊಹಮ್ಮದ್ ಯೂಸುಫ್ ಧಮನಿ ಹಾಗೂ ಯಶವಂತ ಎ.ಎಂ. ಮತ್ತು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.