ಹರಪನಹಳ್ಳಿ: ಸರ್ಕಾರಿ ಶಾಲೆಗಳಿಗೆ ವಿವಿಧ ಉಪಕರಣಗಳ ವಿತರಣೆ

ಹರಪನಹಳ್ಳಿ: ಸರ್ಕಾರಿ ಶಾಲೆಗಳಿಗೆ  ವಿವಿಧ ಉಪಕರಣಗಳ ವಿತರಣೆ

ಹರಪನಹಳ್ಳಿ,ಆ.3- ಬೆಂಗಳೂರಿನ ಶ್ರೀ ಕುಮಾರಸ್ವಾಮಿ ಮಿನರಲ್ ಎಕ್ಸ್‍ಪೊರ್ಟ್  ಸಂಸ್ಥೆ ವತಿಯಿಂದ ತಾಲ್ಲೂಕಿನ ವಿವಿಧ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿವಿಧ ಉಪಕರಣಗಳನ್ನು ವಿತರಿಸಲಾಯಿತು.

ತಾಲ್ಲೂಕಿನ ಅಳಗಂಚಿಕೇರಿ, ತಲವಾಗಲು, ಗುಂಡಗತ್ತಿ ಮತ್ತು ಯಡಿಹಳ್ಳಿ ಗ್ರಾಮಗಳ ಸರ್ಕಾರಿ ಶಾಲೆಗಳಿಗೆ ಕಂಪ್ಯೂಟರ್, ಪ್ರಿಂಟರ್ ಮತ್ತು ಶುದ್ಧ ಕುಡಿಯುವ ನೀರಿನ ಘಟಕ (ಆರ್‍ಓ ಪ್ಲಾಂಟ್)ಗಳನ್ನು ಕೊಡುಗೆಯಾಗಿ ನೀಡಲಾಯಿತು.

ಈ ವೇಳೆ ಮಾತನಾಡಿದ ಎಸ್‍ಕೆಎಂಇಪಿಎಲ್‍ನ ಘಟಕದ ಮುಖ್ಯಸ್ಥ ಶಿರಬಿ ಪ್ರಕಾಶ್, ಸಾಮಾಜಿಕ ಹೊಣೆಗಾರಿಕೆ ಕಾರ್ಯನೀತಿಯಡಿಯಲ್ಲಿ ನಮ್ಮ ಸಂಸ್ಥೆಯು ಇಂತಹ  ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಅದರಲ್ಲೂ ಗ್ರಾಮೀಣ ಪ್ರದೇಶದ ಭಾಗದಲ್ಲಿ ಮೂಲ ಸೌಕರ್ಯದ ಕೊರತೆ ಇರುವ ಸರ್ಕಾರಿ ಶಾಲೆಗಳಿಗೆ ನಮ್ಮ ಸಂಸ್ಥೆಯಿಂದ ವಿವಿಧ ಉಪಕರಣಗಳನ್ನು ನೀಡಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಎಸ್‍ಡಿಎಂಸಿ ಸದಸ್ಯರು ಮಕ್ಕಳು ಇದ್ದರು.  

error: Content is protected !!