ದಾವಣಗೆರೆ, ಸೆ.4- ತಾಲ್ಲೂಕು ಮಟ್ಟದ ಪೋಷಣೆ ಮಾಸಾಚರಣೆ ಕಾರ್ಯಕ್ರಮವು ಹದಡಿ ವೃತ್ತದ ತರಳಬಾಳು ನಗರದಲ್ಲಿ ಮೊನ್ನೆ ನಡೆಯಿತು. ತಾಯಿಯ ಹೆಸರಿನಲ್ಲಿ ಗಿಡ ನೆಡುವುದು, ಸೀಮಂತ, ಅನ್ನ ಪ್ರಾಶನ ಮುಂತಾದ ಕಾರ್ಯಕ್ರಮಗಳು ಜರುಗಿದವು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಇವರುಗಳ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮಗಳು ನಡೆೆದವು.
ಆಯುಷ್ ವೈದ್ಯಾಧಿಕಾರಿ ಡಾ. ಅನುರಾಧ ಮಾತನಾಡಿ, ಪೋಷಣ್ ಮಾಸಾಚರಣೆ ಕೇವಲ ಒಂದು ತಿಂಗಳಿಗೆ ಸೀಮಿತವಾಗದೇ ಪ್ರತೀ ತಿಂಗಳು ಆಗಬೇಕು. ಕಿಶೋರಿಯರು ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡುವುದು ಅವಶ್ಯ ಎಂದು ತಿಳಿಸಿದರು.
ಹದಡಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಶ್ರೀಮತಿ ಪ್ರೇಮಾ ಬಸವರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ ಮಂಜುನಾಥ್, ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಾದ ಶ್ರೀಮತಿ ಪ್ರಿಯದರ್ಶಿನಿ, ಶ್ರೀಮತಿ ನೇತ್ರಾವತಿ, ಹಾಲೇಶ್, ಬೆಳವನೂರು ಪಿಡಿಓ ಶ್ರೀಮತಿ ರೇವತಿ, ಅವರುಗಳು ಮಾತನಾಡಿದರು.
ಬೆಳವನೂರು ಗ್ರಾ.ಪಂ. ಸದಸ್ಯರಾದ ಶ್ರೀಮತಿ ರುದ್ರಮ್ಮ, ಮಾಜಿ ಅಧ್ಯಕ್ಷ ಹನುಮಂತಪ್ಪ, ಮಾಜಿ ಸದಸ್ಯರುಗಳಾದ ವಿಜಯಕುಮಾರ್, ಕೆ.ಎಸ್. ತಿಪ್ಪೇಸ್ವಾಮಿ, ಎಸ್‌ಡಿಎಂಸಿ ಅಧ್ಯಕ್ಷ ಸಿದ್ದಪ್ಪ, ಮುಖ್ಯೋಪಾಧ್ಯಾಯ ಹನುಮಂತಪ್ಪ, ಸುನಿತಾ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.