ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಎ.ಸಿ.ಎಂ ಶಾಲೆಯ ವಿದ್ಯಾರ್ಥಿಗಳ ಸಾಧನೆ

ವಲಯ ಮಟ್ಟದ ಕ್ರೀಡಾ ಕೂಟದಲ್ಲಿ  ಎ.ಸಿ.ಎಂ ಶಾಲೆಯ ವಿದ್ಯಾರ್ಥಿಗಳ ಸಾಧನೆ

ದಾವಣಗೆರೆ, ಸೆ.4- ಇಲ್ಲಿನ ಎ.ಸಿ.ಎಂ ಶಾಲೆಯ ವಿದ್ಯಾರ್ಥಿಗಳು 2024-25ನೇ ಸಾಲಿನ ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ.

ಗುಂಡು ಎಸೆತ,  400 ಮೀಟರ್ ಹಾಗೂ 100 ಮೀಟರ್ ಓಟದ ಸ್ಪರ್ಧೆಯಲ್ಲಿ ವೈಭವನಾಥ್ (ಪ್ರಥಮ), 600 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಣವ್ (ಪ್ರಥಮ), ಅಯಾನ್ (ತೃತೀಯ), ಉದ್ದ ಜಿಗಿತದಲ್ಲಿ ಮಾರುತಿ (ಪ್ರಥಮ) ಸ್ಥಾನ ಪಡೆದಿದ್ದಾರೆ. ವೈಭವನಾಥ, ಅಯಾನ್ ಮತ್ತು ಮಾರುತಿ ರಿಲೇ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಮತ್ತು ಮಹಿಳಾ ವಿಭಾಗದ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಬಿಬಿ ಆಯಿಷಾ ಪ್ರಥಮ ಸ್ಥಾನ ಪಡೆಯುವ ಮೂಲಕ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

error: Content is protected !!