ಹರಪನಹಳ್ಳಿ ಶಿಕ್ಷಕರ ದಿನಾಚರಣೆಯಲ್ಲಿ ಉಪವಿಭಾಗಧಿಕಾರಿ ಚಿದಾನಂದಸ್ವಾಮಿ
ಹರಪನಹಳ್ಳಿ, ಸೆ. 5- ಜೀವನದಲ್ಲಿ ನಾವು ದೊಡ್ಡ ನಗುವನ್ನು, ಸಂತೋಷದ ಮತ್ತು ಸಾಧನೆಯ ಕ್ಷಣವನ್ನು ಕಾಣಬೇಕೆಂದರೆ ಅದಕ್ಕೆ ಕಾರಣೀಕರ್ತರು ಶಿಕ್ಷಕರೇ ಆಗಿರುತ್ತಾರೆ ಎಂದು ಉಪವಿಭಾಗಾಧಿಕಾರಿ ಚಿದಾನಂದಸ್ವಾಮಿ ಹೇಳಿದರು.
ಪಟ್ಟಣದ ತರಳಬಾಳು ಕಲ್ಯಾಣ ಮಂಟಪದ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಂಪ ನ್ಮೂಲ ಕೇಂದ್ರ ಹಾಗೂ ಶಿಕ್ಷಕರ ಸಂಘಟನೆಗಳು ಮತ್ತು ಸರ್ಕಾರಿ ನೌಕರರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಇಂದು ಆಯೋಜಿಸ ಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು.
ಸಸಿ ಒಂದನ್ನು ತೋಟದಲ್ಲಿ ನೆಟ್ಟು ನಿತ್ಯ ಅದನ್ನು ಪೋಷಣೆ ಮಾಡಿ, ಅದರಿಂದ ಬರುವ ಫಲವನ್ನು ಕಾವಲುಗಾರ ಹೇಗೆ ರಕ್ಷಿಸುತ್ತಾನೋ, ಅದೇ ರೀತಿ ಶಿಕ್ಷಕರು ತಮ್ಮ ವಿದ್ಯಾರ್ಥಿಗಳನ್ನು ಬೆಳೆ ಸುತ್ತಾರೆ. ನಮ್ಮ ಮನಸ್ಸು ಮತ್ತು ಹೃದಯಗಳನ್ನು ಪೋಷಿಸುತ್ತಾರೆ. ನಮ್ಮ ಆಸಕ್ತಿಯ ಕ್ಷೇತ್ರದಲ್ಲಿ ಬೆಳೆಯಲು ನಮಗೆ ಸಹಾಯ ಮಾಡುತ್ತಾರೆ. ನಮ್ಮ ಭವಿಷ್ಯ ಉಜ್ವಲವಾಗಬೇಕೆಂದರೆ ಅದಕ್ಕೆ ಶಿಕ್ಷಕರೇ ಕಾರಣರಾಗಿರುತ್ತಾರೆ ಎಂದರು.
ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ವೈ.ಎಚ್. ಮಾತನಾಡಿ, ಶಿಕ್ಷಕ ವೃತ್ತಿ ಎನ್ನುವುದು ಸತ್ತ ಮೇಲೂ ಜೀವಂತ ವೃತ್ತಿ ಎನಿಸುತ್ತದೆ ಹಾಗಾಗಿ ಶಿಕ್ಷಕರು ನಿರಂತರ ಅಧ್ಯಯನ ಶೀಲರಾಗಬೇಕು ಎಂದರು.
ಪುರಸಭೆ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ್ ಮಾತನಾಡಿ, `ಹಿಂದೆ ಗುರುವಿರಲಿ, ಮುಂದೆ ಗುರಿಯಿರಲಿ’ ಎಂಬ ಒಂದು ಮಾತಿದೆ. ಅದೇ ರೀತಿ ಶಿಕ್ಷಕರು ಯಾವಾಗಲೂ ನಮಗೆ ಗುರಿ ತೋರಿಸುತ್ತಾರೆ. ನಾವು ಆ ಗುರಿಯ ಪಥದಲ್ಲಿ ನಡೆಯಬೇಕಷ್ಟೇ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್. ಲೇಪಾಕ್ಷಪ್ಪ ಮಾತನಾಡಿ, ತಾಲ್ಲೂಕಿನಲ್ಲಿ 1320 ಶಿಕ್ಷಕರು, 158 ಅತಿಥಿ ಶಿಕ್ಷಕರಿದ್ದು 271 ಖಾಲಿ ಹುದ್ದೆಗಳಿವೆ. 23 ಆಂಗ್ಲ ಮಾಧ್ಯಮ ಶಾಲೆಗಳಿದ್ದು, 23 ಎಲ್.ಕೆ.ಜಿ ಹಾಗೂ ಯು.ಕೆ.ಜಿ ಶಾಲೆಗಳು ಪ್ರಾರಂಭವಾಗಿದ್ದು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ನಾವು ಸದಾ ಸಿದ್ದರಿದ್ದೇವೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ.
ಅಂಜಿನಪ್ಪ, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಯು.ಬಸವರಾಜಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಮಪ್ಪ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಸಂಗಪ್ಪನವರ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಜಿ.ಪದ್ಮಲತಾ, ಜಿಲ್ಲಾ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎನ್.ಜಿ.ಮನೋಹರ, ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಎಂ.ಅಂಜನೇಯ, ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಎಚ್.ಕೆ.ಚಂದ್ರಪ್ಪ, ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ತಿರುಪತಿ, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಮಕಬುಲ್ ಬಾಷಾ, ಎನ್.ಪಿ.ಎಸ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ ಸೊಪ್ಪಿನ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಕೆ.ಷಣ್ಮುಖಪ್ಪ, ಶಿಕ್ಷಣ ಇಲಾಖೆಯ ಮಂಜುನಾಥ ಗಿರಜ್ಜಿ, ಶಿಕ್ಷಕರಾದ ಪದ್ಮರಾಜ ಜೈನ್, ಬಿ.ಕೊಟ್ರೇಶ, ಷರೀಫ್ ಸೇರಿದಂತೆ ಇತರರು ಇದ್ದರು