ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಗಾಯತ್ರಿ ಸಿದ್ದೇಶ್ವರ ಮನವಿ
ಹೊನ್ನಾಳಿ, ಸೆ.5- ಬಿಜೆಪಿ ಪಕ್ಷವನ್ನು ಸದೃಢಗೊಳಿಸಲು ಮತ್ತು ಪ್ರಧಾನಿ ಮೋದಿ ಅವರ ಕೈ ಬಲಪಡಿಸಲು, ಕಾರ್ಯಕರ್ತರು ಪಕ್ಷದ ಸದಸ್ಯತ್ವ ಸಂಖ್ಯೆ ಹೆಚ್ಚಿಸಬೇಕಿದೆ ಎಂದು ಬಿಜೆಪಿಯ ಪರಾಜಿತ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ತಿಳಿಸಿದರು.
ಪಟ್ಟಣದ ಗುರು ಭವನದಲ್ಲಿ ಬುಧವಾರ ಆಯೋಜಿಸಿದ್ದ ಸದಸ್ಯತ್ವ ಅಭಿಯಾನ ಕಾರ್ಯ ಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪಕ್ಷವು 2014ರ ಲೋಕಸಭಾ ಚುನಾವಣೆಯಲ್ಲಿ 7500 ಮತಗಳಿಂದ ಮುನ್ನಡೆ ಸಾಧಿಸಿದ್ದರೇ 2019ರಲ್ಲೂ 13 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿತ್ತು. ಆದರೆ ಕಳೆದ ಚುನಾವಣೆಯಲ್ಲಿ 7 ಸಾವಿರ ಮತಗಳ ಹಿನ್ನಡೆ ಕಂಡಿದ್ದರೂ ಪಕ್ಷದ ಪ್ರಾಮಾಣಿಕ ಕಾರ್ಯಕರ್ತರು ಮತ್ತು ಮತದಾರರ ಬೆಂಬಲದಿಂದ ಇಷ್ಟೊಂದು ಮತಗಳು ಬರಲು ಸಾಧ್ಯವಾಯಿತು ಎಂದ ಅವರು, ಸೋಲಿಗೆ ಕುಗ್ಗದೆ ಪಕ್ಷವನ್ನು ಬಲಪಡಿಸೋಣ ಎಂದರು.
ತಾಲ್ಲೂಕು ಮಾಜಿ ಅಧ್ಯಕ್ಷ ಅರಕೆರೆ ಎ.ಬಿ ಹನುಮಂತಪ್ಪ ಮಾತನಾಡಿ, ಹೆಚ್ಚು ಸದಸ್ಯತ್ವ ಹೊಂದಿದ ಪ್ರಜಾಪ್ರಭುತ್ವದ ಅತೀ ದೊಡ್ಡ ಪಕ್ಷದಲ್ಲಿ ಸದಸ್ಯತ್ವ ಹೊಂದಿದ್ದು ಹೆಮ್ಮೆಯ ಸಂಗತಿ. ತಾಲ್ಲೂಕಿನಲ್ಲಿ 1 ಲಕ್ಷ ಸದಸ್ಯತ್ವದ ಗುರಿ ಸಾಧಿಸೋಣ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಎಂ.ಆರ್. ಮಹೇಶ್ ಮಾತನಾಡಿ, ತಾಲ್ಲೂಕಿನಲ್ಲಿ ಕಳೆದ ಬಾರಿ ಪಕ್ಷವು 80 ಸಾವಿರ ಸದಸ್ಯತ್ವ ಹೊಂದಿತ್ತು. ಆದರೆ ಕಾರ್ಯಕರ್ತರಲ್ಲಿನ ಅತಿಯಾದ ವಿಶ್ವಾಸವೇ ಅಭ್ಯರ್ಥಿ ಸೋಲಿಗೆ ಕಾರಣವಾಗಿದೆ ಎಂದರು.
ತಾಲ್ಲೂಕಿನಲ್ಲಿ ಬಿಜೆಪಿ ಕಚೇರಿ ನಿರ್ಮಾಣಕ್ಕೆ ಜಾಗ ಖರೀದಿಸಲು ಮುಂದಾಗಬೇಕು ಎಂದು ಹೇಳಿದರು.
ಈ ವೇಳೆ ದೀಪಾ ಜಗದೀಶ್, ಕೆ.ವಿ. ಚೆನ್ನಪ್ಪ, ಶಾಂತರಾಜ್ ಪಾಟೀಲ್ ಮಾತನಾಡಿದರು.
ಪಕ್ಷದ ಪ್ರಧಾನ ಕಾರ್ಯದರ್ಶಿ ನ್ಯಾಮತಿ ಪಿ.ಕೆ ರವಿ, ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಮುಖಂಡರಾದ ನೆಲಹೊನ್ನೆ ದೇವರಾಜ್, ನ್ಯಾಮತಿ ನಟರಾಜ್, ಯಕ್ಕನಹಳ್ಳಿ ಜಗದೀಶ್ ಮತ್ತಿತರರಿದ್ದರು.