ಬಗರ್ ಹುಕುಂ ಸಾಗುವಳಿ ಪತ್ರಕ್ಕೆ ಆಗ್ರಹಿಸಿ ಮಲೇಬೆನ್ನೂರಿನಿಂದ ದಾವಣಗೆರೆವರೆಗೆ ರೈತರ ಪ್ರತಿಭಟನೆ

ಬಗರ್ ಹುಕುಂ ಸಾಗುವಳಿ ಪತ್ರಕ್ಕೆ ಆಗ್ರಹಿಸಿ  ಮಲೇಬೆನ್ನೂರಿನಿಂದ ದಾವಣಗೆರೆವರೆಗೆ ರೈತರ ಪ್ರತಿಭಟನೆ

ಮಲೇಬೆನ್ನೂರು, ಸೆ. 5- ಬಗರ್ ಹುಕುಂ ಸಾಗುವಳಿ ಪತ್ರ ನೀಡುವಂತೆ ಒತ್ತಾಯಿಸಿ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಗುರುವಾರ ಮಲೇಬೆನ್ನೂರಿನಿಂದ ದಾವಣಗೆರೆವರೆಗೆ ಪ್ರತಿಭಟನೆ ನಡೆಸಿ, ನಂತರ ಅಪಾರ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಲಾಯಿತು.

ಹರಿಹರ, ಚನ್ನಗಿರಿ, ಹೊನ್ನಾಳಿ, ನ್ಯಾಮತಿ ಹಾಗೂ ಜಗಳೂರು ತಾಲ್ಲೂಕುಗಳಲ್ಲಿ ಕಳೆದ 25-30 ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದಿರುವ ರೈತರಿಗೆ ತುರ್ತಾಗಿ ಹಕ್ಕು ಪತ್ರ ನೀಡಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸುತ್ತಿರುವುದರಿಂದ ರೈತರ ಆಧಾರ್ ಜೋಡಣೆಯನ್ನು ಸರ್ಕಾರ ಕೂಡಲೇ ಕೈ ಬಿಡಬೇಕು. ದಾವಣಗೆರೆ ಜಿಲ್ಲೆಯಲ್ಲಿ ಬೆಳೆದಿರುವ ಮೆಕ್ಕೆಜೋಳವನ್ನು ಸರ್ಕಾರ ಹಾಲು ಒಕ್ಕೂಟಕ್ಕೆ ಖರೀದಿಸಬೇಕು. ಭೂಪಾನ ಇಲಾಖೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ರೈತರು ಅಲೆದಾಡುತ್ತಿದ್ದು, ಈ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದು ಆಗ್ರಹಿಸಿ, ಈ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ ಎಂದು ರೈತ ಸಂಘದ ರಾಜ್ಯ ಕಾರ್ಯದರ್ಶಿ ಬಲ್ಲೂರು ರವಿಕುಮಾರ್, ಜಿಲ್ಲಾ ಕಾರ್ಯಾಧ್ಯಕ್ಷ ಕೋಗಳಿ ಮಂಜುನಾಥ್ ತಿಳಿಸಿದರು.

ಮಲೇಬೆನ್ನೂರಿನ ನೀರಾವರಿ ಇಲಾಖೆ ಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ದಾವಣಗೆರೆಯ ಅಂಬೇಡ್ಕರ್ ವೃತ್ತ, ಜಯದೇವ ವೃತ್ತ ಮತ್ತು ಪಿ.ಬಿ.ರಸ್ತೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿತು.

ರೈತ ಸಂಘದ ಜಿಲ್ಲಾ ಕಾರ್ಯದರ್ಶಿ  ವಕೀಲ ಮಂಜುನಾಥ್, ಹರಿಹರ ತಾ. ಅಧ್ಯಕ್ಷ ಬೆಳಕೆರೆ ಬಸಣ್ಣ, ಮಾಯಕೊಂಡ ಪ್ರತಾಪ್, ಮೀಯಾಪುರ ತಿರುಮಲೇಶ್ ಸೇರಿದಂತೆ ಇನ್ನೂ ಅನೇಕರು ಭಾಗವಹಿಸಿದ್ದರು.

error: Content is protected !!