ದಾವಣಗೆರೆ, ಸೆ.9- ಸ್ಥಳೀಯ ಲಯನ್ಸ್ ಕ್ಲಬ್ ಮತ್ತು ಲಯನ್ಸ್ ಶಾಲಾ ಸಹಯೋಗದಲ್ಲಿ ಈಚೆಗೆ ನಗರದ ಲಯನ್ಸ್ ಭವನದಲ್ಲಿ ಶಿಕ್ಷಕರ ದಿನ ಆಚರಿಸಲಾಯಿತು.
ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣದ ಅವಶ್ಯಕತೆಯಿದೆ ಎಂದು ವಾಣಿಜ್ಯ ತೆರಿಗೆ ಉಪ ಆಯುಕ್ತ ಹೆಚ್.ಎಸ್. ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಲಯನ್ಸ್ ಶಾಲೆಯ ಅಧ್ಯಕ್ಷ ಆರ್.ಜಿ.ಶ್ರೀನಿವಾಸ್ ಮೂರ್ತಿ, ಕಾರ್ಯದರ್ಶಿ ಬೆಳ್ಳೂಡಿ ಶಿವಕುಮಾರ್, ಶಾಲೆಯ ಮುಖ್ಯ ಶಿಕ್ಷಕಿ ಪಾವನ, ಲಯನ್ ಅಧ್ಯಕ್ಷ ಎಸ್.ಜಿ. ಉಳವಯ್ಯ, ವಾಣಿಜ್ಯ ತೆರಿಗೆ ಪರಿವೀಕ್ಷಕ ಕೆ.ಎಸ್. ರಾಜಶಂಕರ್, ಪ್ರಾಂತೀಯ ಅಧ್ಯಕ್ಷ ವೈ.ಬಿ. ಸತೀಶ್, ಲಯನ್ ಟ್ರಸ್ಟ್ ಕಾರ್ಯದರ್ಶಿ ಎ.ಎಸ್. ಮೃತ್ಯುಂಜಯ, ಲಯನ್ ಕಾರ್ಯದರ್ಶಿ ಅಜಯ್ ನಾರಾಯಣ್, ಮುರುಗೇಶ್ ಕಣಕುಪ್ಪಿ ಇದ್ದರು. ಶಿಕ್ಷಕಿ ಮಹಾಲಕ್ಷ್ಮಿ ನಿರೂಪಿಸಿದರು. ಜ್ಯೋತಿ ವಂದಿಸಿದರು.