ದಾವಣಗೆರೆ, ಸೆ. 15- ಮೀಸಲಾತಿ ರದ್ದುಪಡಿಸುವಂತೆ ನೀಡಿರುವ ಲೋಕಸಭಾ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅಮೆರಿಕಾದ ಜಾರ್ಜ್ ಟೌನ್ನ ವಿವಿಯಲ್ಲಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ನಿನ್ನೆ ಪ್ರತಿಭಟನೆ ನಡೆಸಿದರು.
ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮೆರವಣಿಗೆ ಮೂಲಕ ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿದ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದರು.
ಇದೇ ವೇಳೆ ಮಾತನಾಡಿದ ಬಿಜೆಪಿ ಮುಖಂಡರು, ಸಿಎಂ ಸಿದ್ದರಾಮಯ್ಯ ಅವರು ಎಸ್ಸಿ, ಎಸ್ಟಿ ಗಳ 25 ಸಾವಿರ ಕೋಟಿ ಹಣವನ್ನು ಬೇರೆ ಬೇರೆ ಇಲಾಖೆಗಳಿಗೆ ವರ್ಗಾವಣೆ ಮಾಡಿದ್ದಾರೆ.
ಇದು ಕೂಡ ಎಸ್ಸಿ, ಎಸ್ಟಿಗಳಿಗೆ ಮಾಡಿದ ಘೋರ ಅನ್ಯಾಯವಾಗಿದೆ. ಎಸ್ಸಿ, ಎಸ್ಟಿಗಳ ಅಭಿವೃದ್ಧಿಗಾಗಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಇದ್ದ ಹಣವನ್ನು ಬಳ್ಳಾರಿ ಚುನಾವಣೆಗೆ ಬಳಸಿದ್ದಾರೆ. 187 ಕೋಟಿ ಹಣವನ್ನು ಲೂಟಿ ಮಾಡಿದ್ದಾರೆಂದು ಆರೋಪಿಸಿದರು.
ಪತ್ರಿಭಟನೆಯಲ್ಲಿ ಗಾಯತ್ರಿ ಸಿದ್ಧೇಶ್ವರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್, ಮಾಜಿ ಶಾಸಕರಾದ ಎಂ. ಬಸವರಾಜನಾಯ್ಕ, ಎಸ್.ವಿ. ರಾಮಚಂದ್ರ, ಹೆಚ್.ಪಿ. ರಾಜೇಶ್, ಮುಖಂಡರಾದ ಶ್ರೀನಿವಾಸ ದಾಸಕರಿಯಪ್ಪ, ಲೋಕಿಕೆರೆ ನಾಗರಾಜ್, ಎಸ್.ಟಿ. ವೀರೇಶ್, ರಾಜನಹಳ್ಳಿ ಶಿವಕುಮಾರ್, ಅಣ್ಣೇಶ್, ಅನಿಲ್ ನಾಯ್ಕ, ಶಶಿಕುಮಾರ್, ಹೆಚ್.ಸಿ. ಜಯಮ್ಮ, ಬಿ.ಟಿ. ಸಿದ್ಧಪ್ಪ, ಮಂಜಾನಾಯ್ಕ, ಕೃಷ್ಣಕುಮಾರ್, ಜಿ.ವಿ. ಗಂಗಾಧರ್, ರಮೇಶ್, ಫಣಿಯಾಪುರ ಲಿಂಗರಾಜ್ ಮತ್ತಿತರರು ಭಾಗವಹಿಸಿದ್ದರು.