ಹರಿಹರ, ಸೆ. 18 – ನಗರದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿಯನ್ನು ಸಾಂಕೇತಿಕವಾಗಿ ಆಚರಣೆ ಮಾಡಲಾಯಿತು.
ಈ ವೇಳೆ ಶಾಸಕ ಬಿ.ಪಿ. ಹರೀಶ್ ವಿಶ್ವಕರ್ಮ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಣೆಗೆ ಚಾಲನೆ ನೀಡಿದರು. ತಹಶೀಲ್ದಾರ್ ಗುರುಬಸವರಾಜ್, ತಾಲ್ಲೂಕು ಆಡಳಿತದ ಸಿಬ್ಬಂದಿಗಳು ಮತ್ತು ವಿಶ್ವಕರ್ಮ ಸಮಾಜದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಹಾಜರಿದ್ದರು.