ಶ್ರೀದೇವಿ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶ್ರೀದೇವಿ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಲೇಬೆನ್ನೂರು, ಸೆ.19- ಇಲ್ಲಿನ ಶ್ರೀದೇವಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹರಿಹರದಲ್ಲಿ ನಡೆದ ತಾಲ್ಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಬಾಲಕರ ಖೋ – ಖೋ ಆಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

ವಿದ್ಯಾಸಂಸ್ಥೆಯ ಕಾರ್ಯದರ್ಶಿ ಗೋವಿಂದಪ್ಪ ಸಾವಜ್ಜಿ, ಮುಖ್ಯ ಶಿಕ್ಷಕ ಎಂ.ಜಿ.ನಾಗರಾಜ್ ಮತ್ತು ತಾಲ್ಲೂಕು ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಟಿ.ಮಂಜಪ್ಪ ಹಾಗೂ ಶಾಲಾ ಶಿಕ್ಷಕರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

error: Content is protected !!