ಗಲಭೆಗಳಿಗೆ ರಾಜ್ಯ ಸರ್ಕಾರವೇ ಹೊಣೆ : ರೇಣುಕಾಚಾರ್ಯ

ಗಲಭೆಗಳಿಗೆ ರಾಜ್ಯ ಸರ್ಕಾರವೇ ಹೊಣೆ : ರೇಣುಕಾಚಾರ್ಯ

ದಾವಣಗೆರೆ, ಸೆ. 20 – ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದವರ ವಿರುದ್ಧ ಹಾಗೂ ಕೋಮು ಗಲಭೆ ನಡೆಸಿದವರ  ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ದಾಂಧಲೆ ನಡೆದ ಮಟ್ಟಿಕಲ್ಲು, ಆನೆಕೊಂಡ ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿದ ನಂತರ ಅವರು ಸುದ್ದಿಗಾರರೊಂದಿಗೆ  ಮಾತನಾಡಿದರು. ನಾಗಮಂಗಲದಲ್ಲಿ ಗಲಭೆ ನಡೆದಾಗ ಗೃಹ ಸಚಿವ ಜಿ. ಪರಮೇಶ್ವರ್ ಅವರು ಸಣ್ಣ ಘಟನೆ ಎಂದು ಸಮರ್ಥಿಸಿಕೊಂಡಿದ್ದಾರೆ. ಹಿಂದೂಗಳ ವಿರುದ್ಧ ಬೇಕಾಬಿಟ್ಟಿ ಪ್ರಕರಣ ದಾಖಲಿಸಿ ಬಂಧಿಸುತ್ತಿರುವ ರಾಜ್ಯ ಸರ್ಕಾರವೇ ಈ ಘಟನೆಗೆ ಹೊಣೆ ಎಂದು ಕಿಡಿ ಕಾರಿದರು.

ಈ ಘಟನೆಗೆ ಹಿಂದೂ ಮುಖಂಡ ಸತೀಶ್ ಪೂಜಾರಿ ಪ್ರಚೋದನಕಾರಿ ಹೇಳಿಕೆ ಕಾರಣವಲ್ಲ. ರಾಜ್ಯದ ಹಲವೆಡೆ ವ್ಯವಸ್ಥಿತವಾಗಿ ಘಟನೆಗಳನ್ನು ನಡೆಸಲಾಗುತ್ತಿದೆ ಎಂದು ರೇಣುಕಾಚಾರ್ಯ ಆರೋಪಿಸಿದರು.

ಇಂತಹ ವಿಚಾರಗಳಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಮುಂದೆಯೂ  ಇಂಥ ಘಟನೆ ನಡೆದರೆ ಹಿಂದೂಗಳ ರಕ್ಷಣೆಗೆ ಬೀದಿಗೆ ಇಳಿಯಬೇಕಾಗುತ್ತದೆ ಎಂದವರು ಎಚ್ಚರಿಸಿದರು.

ಪೊಲೀಸರ ಮೇಲೇ ಹಲ್ಲೆಯಾಗುತ್ತಿದ್ದರೂ ರಕ್ಷಣೆ ಮಾಡಿಕೊಳ್ಳಲು ಆಗಿಲ್ಲ. ಸರ್ಕಾರ ಹಿಂದೂಗಳ ಮೇಲೆ ದೌರ್ಜನ್ಯ ಎಸಗುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬಿಜೆಪಿ ಶಾಸಕ ಬಿ.ಪಿ.ಹರೀಶ್‌ ದೂರಿದರು.

error: Content is protected !!