ದಾವಣಗೆರೆ ಲೋಕ ಸಭಾ ಚುನಾವಣೆ ಹಾಗೂ ಪಕ್ಷದ ಸಂಘಟನೆಗೆ ಸಂ ಬಂಧಿಸಿದಂತೆ ಚರ್ಚಿಸಲು ಜಿಲ್ಲಾ ಕಾಂಗ್ರೆಸ್‍ನ ಮುಂ ಚೂಣಿ ಘಟಕದ ಪದಾಧಿ ಕಾರಿಗಳ ಸಭೆಯನ್ನು ಇಂದು ಮಧ್ಯಾಹ್ನ 12 ಕ್ಕೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಸ್ಸೆಸ್ ಭವನದಲ್ಲಿ ಕರೆಯಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪ ಅವರ ಅಧ್ಯಕ್ಷತೆಯಲ್ಲಿ ಕರೆದಿರುವ ಈ ಸಭೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯಕುಮಾರ್ ಸೊರಕೆ ಅವರು ಭಾಗವಹಿಸುವರು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.
January 22, 2025