ದಾವಣಗೆರೆ, ಸೆ. 25- ನಗರದ ವಿಶ್ವಚೇತನ ವಿದ್ಯಾನಿಕೇತನ ವಸತಿಯುತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶೈಕ್ಷಣಿಕ ಸಾಲಿನಲ್ಲಿ ಪ.ಪೂ. ಶಿಕ್ಷಣ ಇಲಾಖೆಯಿಂದ ಈಚೆಗೆ ನಗರದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತರಾಗಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕಾಲೇಜು ಸಂಸ್ಥಾಪಕ ಅಧ್ಯಕ್ಷರಾದ ಡಾ. ವಿಜಯಲಕ್ಷ್ಮಿ ವೀರಚಮಾನೇನಿ, ಪ್ರಾಂಶು ಪಾಲ ಜಿ. ವಿನೋದ್, ನಟರಾಜ್ ವಿಜೇತ ಮಕ್ಕಳಿಗೆ ಅಭಿನಂದಿಸಿದ್ದಾರೆ.
January 9, 2025