ಜಗಳೂರು, ಸೆ. 27 – ಬೆಂಗಳೂರಿನ ಬುದ್ದ, ಬಸವ, ಗಾಂಧಿ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಿದ್ಧನಹಳ್ಳಿ ಶ್ರೀಮತಿ ಪದ್ಮ ಸಿದ್ದೇಗೌಡ ನೆನಪಿನಲ್ಲಿ ಕೊಡ ಮಾಡುವ ರಾಜ್ಯ ಮಟ್ಟದ ಲೋಹಿಯ ಪ್ರಶಸ್ತಿಗೆ ಜಗಳೂರಿನ ಹಿರಿಯ ಸಾಹಿತಿ ಹಾಗೂ ನಿವೃತ್ತ ಲೀಡ್ ಬ್ಯಾಂಕ್ ವಿಭಾಗೀಯ ವ್ಯವಸ್ಥಾಪಕ ಎನ್.ಟಿ. ಎರಿ ಸ್ವಾಮಿ ಆಯ್ಕೆಯಾಗಿದ್ದಾರೆ.
ಅ. 6 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರಶಸ್ತಿ ಪ್ರಧಾನ ಸಮಾರಂಭದ ಅಧ್ಯಕ್ಷತೆಯನ್ನು ಸುಮಂಗಲಿ ಸೇವಾಶ್ರಮದ ಅಧ್ಯಕ್ಷ ಶ್ರೀಮತಿ ಎಸ್.ಜಿ. ಸುಶೀಲಮ್ಮ ವಹಿಸಿಕೊಳ್ಳಲಿದ್ದಾರೆ. ಪ್ರೊ. ಬಿ. ಕೃಷ್ಣಪ್ಪ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಶ್ರೀಮತಿ ಇಂದಿರಾ ಕೃಷ್ಣಪ್ಪ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರೊ . ಸಿಸಿರಾ ರವರು ತಿಳಿಸಿದ್ದಾರೆ.