ನಗರದಲ್ಲಿ ಇಂದು ಅನ್ನ ಸಂತರ್ಪಣೆ, ರಕ್ತದಾನ ಶಿಬಿರ

ನಗರದಲ್ಲಿ ಇಂದು  ಅನ್ನ ಸಂತರ್ಪಣೆ, ರಕ್ತದಾನ ಶಿಬಿರ

ಹಿಂದೂ ಮಹಾ ಗಣಪತಿ ಟ್ರಸ್ಟ್ ವತಿಯಿಂದ ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಲಾ ಗಿರುವ ಹಿಂದೂ ಮಹಾಗಣಪತಿ ವಿಸರ್ಜನೆಯು ಇದೇ ದಿನಾಂಕ 5ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಮಂಗಳವಾರ ಅನ್ನ ಸಂತರ್ಪಣೆ ಏರ್ಪಡಿಸ ಲಾಗಿದೆ. ಹಾಗೂ ಕರ್ನಾಟಕ ಸರ್ಕಾರ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ  ಬೃಹತ್ ರಕ್ತ ದಾನ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಹಿಂದೂ ಮಹಾ ಗಣಪತಿ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಜೊಳ್ಳಿ ಗುರು ತಿಳಿಸಿದ್ದಾರೆ.

error: Content is protected !!