ತಂಬಾಕು ಉತ್ಪನ್ನಗಳ ಸೇವನೆ ದುಷ್ಪರಿಣಾಮದ ಜಾಗೃತಿ

ತಂಬಾಕು ಉತ್ಪನ್ನಗಳ ಸೇವನೆ ದುಷ್ಪರಿಣಾಮದ ಜಾಗೃತಿ

ದಾವಣಗೆರೆ, ಸೆ. 29 – ತಂಬಾಕು ಉತ್ಪನ್ನಗಳ ಸೇವನೆಗಳಿಂದಾಗುವ ದುಷ್ಪರಿಣಾ ಮಗಳ ಬಗ್ಗೆ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಪ್ರಚಾರದ ಜೊತೆಗೆ, ಕಾನೂನು ಬಾಹಿರ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾವೀರ್ ಮ. ಕರೆಣ್ಣವರ್ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ತಂಬಾಕು ಮುಕ್ತ ಯುವ ಅಭಿಯಾನ 2 ಕಾರ್ಯಕ್ರಮದ ಅನುಕ್ರಮದ  ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು. 

ಜಿಲ್ಲೆಯಲ್ಲಿ ಸೆ.24 ರಿಂದ ನ.23 ರವರೆಗೆ ತಂಬಾಕು ಮುಕ್ತ ಯುವ ಅಭಿಯಾನ 2.0 ಆರಂಭವಾಗಲಿದೆ. ಈ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಕರಣ ಗೊಳಿಸಬೇಕು ಹಾಗೂ ಸಾರ್ವಜನಿಕ ಸ್ಥಳಗ ಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿನ 160 ಶಾಲಾ-ಕಾಲೇಜು ಗಳಲ್ಲಿ 60 ದಿನಗಳ ಕಾಲ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು ಹಾಗೂ ತಂಬಾಕು ಮುಕ್ತ ಗ್ರಾಮ, ತಂಬಾಕು ಮುಕ್ತ ಕಚೇರಿ ಹಾಗೂ ತಂಬಾಕು ಮುಕ್ತ ಶಾಲೆ ಘೋಷಣೆ ಮಾಡಲು ನಾವೆಲ್ಲರು ಶ್ರಮಿಸಬೇಕು ಎಂದು ತಿಳಿಸಿ, ಶಾಲಾ-ಕಾಲೇಜು ಆವರಣಗಳಲ್ಲಿ 100 ಮೀಟರ್ ಪ್ರದೇಶ ವ್ಯಾಪ್ತಿಯಲ್ಲಿ ತಂಬಾಕು ಸೇವನೆ ಹಾಗೂ ಮಾರಾಟ ನಿಷೇಧ ಎಂದು ಹಳದಿ ಬಣ್ಣದ ಲೈನ್ ಹಾಕಿಕೊಳ್ಳಬೇಕು ಎಂದು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಅಧ್ಯಕ್ಷತೆ ವಹಿಸಿ ಜಿಲ್ಲಾ ಮಟ್ಟದ ತಂಬಾಕು ಮುಕ್ತ ಯುವ ಅಭಿಯಾನ 2.0 ಪೋಸ್ಟರ್ ಬಿಡುಗಡೆ ಮಾಡಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ, ರಾಘವನ್ ತಂಬಾಕು ಮುಕ್ತ ಅರಿವು ಕಾರ್ಯಕ್ರಮ ಆಯೋಜಿಸುವ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯ ಕುಮಾರ್ ಎಂ. ಸಂತೋಷ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೃಷ್ಣನಾಯ್ಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಷಣ್ಮುಖಪ್ಪ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೊಟ್ರೇಶ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!