ದಾವಣಗೆರೆ, ಸೆ.29- ನಗರದ ಕೆಇಬಿ ಸಮುದಾಯ ಭವನದಲ್ಲಿ ಶನಿವಾರ ನಡೆದ ಪ್ಯಾನ್ ಇಂಡಿಯಾ ಮಾಸ್ಟರ್ ಗೇಮ್ಸ್ ಫೆಡರೇಷನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 3ನೇ ರಾಷ್ಟ್ರೀಯ ಮಾಸ್ಟರ್ಸ್ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಮಹಾನಗರ ಪಾಲಿಕೆ ಸದಸ್ಯ ಕೆ.ಎಂ. ವೀರೇಶ್ ಚಿನ್ನದ ಪದಕ ಪಡೆದಿದ್ದಾರೆ.
45+ ವಯೋಮಾನದ 73 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಮಾರ್ಚ್‌ನಲ್ಲಿ ನಡೆಯಲಿರುವ ಅಂತರ್ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.