ದಾವಣಗೆರೆ, ಸೆ. 30- ಲಯನ್ಸ್ ಕ್ಲಬ್ ವಿದ್ಯಾನಗರ ವತಿಯಿಂದ ಇಂಜಿನಿಯರ್ ದಿನಾಚರಣೆ ಆಚರಿಸಲಾಯಿತು. ನಿವೃತ್ತ ಮುಖ್ಯ ಇಂಜಿನಿಯರ್ ಬಸವನಗೌಡ, ನಿವೃತ್ತ ಅಧೀಕ್ಷಕ ಇಂಜಿನಿಯರ್ ಟಿ. ಲಕ್ಷ್ಮಪ್ಪ ಮತ್ತು ನಿವೃತ್ತ ಸಹಾಯಕ ಕಾರ್ಯಪಾಲಕ ಇಂಜಿನಿಯರುಗಳಾದ ಬಿ.ಬಿ. ರಾಮಚಂದ್ರ, ಬಿ. ಪುಟ್ಟಸ್ವಾಮಿ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ಎಲ್.ಎಸ್. ಪ್ರಭುದೇವ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಲಯನ್ಸ್ ಮಾಜಿ ರಾಜ್ಯಪಾಲರುಗಳಾದ ಡಾ. ಜಿ. ಶಿವಯೋಗಪ್ಪ, ಡಾ. ಟಿ. ಬಸವರಾಜ್, ಹೆಚ್.ಎನ್. ಶಿವಕುಮಾರ್, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಡಾ. ಹೆಚ್.ಎಸ್. ಮಂಜುನಾಥ ಕುರ್ಕಿ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
October 9, 2024