ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ

ರೈಲುಗಳ ತಾತ್ಕಾಲಿಕ  ನಿಲುಗಡೆ ಮುಂದುವರಿಕೆ

ದಾವಣಗೆರೆ, ಸೆ. 30 – ರಾಮಗಿರಿ, ಬೀರೂರು ಮತ್ತು ಆಲೂರು ನಿಲ್ದಾಣಗಳಲ್ಲಿ ಕೆಲವು ರೈಲುಗಳಿಗೆ ಇದ್ದ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ನೈಋತ್ಯ ರೈಲ್ವೆ ಮುಂದುವರೆಸಲು ನಿರ್ಧರಿಸಿದೆ ಎಂದು ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ್ ಕನಮಡಿ ತಿಳಿಸಿದ್ದಾರೆ.

ರೈಲು ಸಂಖ್ಯೆ: 17325/17326 ಬೆಳಗಾವಿ-ಮೈಸೂರು-ಬೆಳಗಾವಿ ವಿಶ್ವಮಾನವ ಡೈಲಿ ಎಕ್ಸ್‍ಪ್ರೆಸ್, ರೈಲು ಸಂಖ್ಯೆ: 17391/17392 ಕೆಎಸ್‍ಆರ್ ಬೆಂಗಳೂರು-ಎಸ್‍ಎಸ್‍ಎಸ್ ಹುಬ್ಬಳ್ಳಿ, ಕೆಎಸ್‍ಆರ್ ಬೆಂಗಳೂರು ಡೈಲಿ ಎಕ್ಸ್‍ಪ್ರೆಸ್ ರೈಲುಗಳಿಗೆ ರಾಮಗಿರಿ ನಿಲ್ದಾಣದಲ್ಲಿ ಇರುವ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಅ. 1 ರಿಂದ ಡಿ. 31 ರವರೆಗೆ ಮೂರು ತಿಂಗಳ ಕಾಲ ಮುಂದುವರೆಸಲಾಗಿದೆ.

ರೈಲು ಸಂಖ್ಯೆ: 16587/16588 ಯಶವಂತಪುರ-ಬಿಕ್‌ನೇರ್-ಯಶವಂತಪುರ- ಬೀ ವೀಕ್ಲಿ ಎಕ್ಸ್‍ಪ್ರೆಸ್ ರೈಲುಗಳಿಗೆ ಬೀರೂರು ನಿಲ್ದಾಣದಲ್ಲಿ ಇರುವ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆ ಅ. 1 ರಿಂದ ಡಿ. 31 ರವರೆಗೆ ಮೂರು ತಿಂಗಳು ನಿಲುಗಡೆ ಮುಂದುವರಿಯಲಿದೆ.

ರೈಲು ಸಂಖ್ಯೆ 16515/16516 ಯಶವಂತಪುರ-ಕಾರವಾರ-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‍ಪ್ರೆಸ್, ರೈಲು ಸಂಖ್ಯೆ 16575 / 16576 ಯಶವಂತಪುರ-ಮಂಗಳೂರು ಜಂಕ್ಷನ್-ಯಶವಂತಪುರ ಗೋಮಟೇಶ್ವರ ಟ್ರೈ-ವೀಕ್ಲಿ ಎಕ್ಸ್‍ಪ್ರೆಸ್ ರೈಲು ಸಂಖ್ಯೆ 16539 / 16540 ಯಶವಂತಪುರ-ಮಂಗಳೂರು-ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್‍ಪ್ರೆಸ್  ರೈಲುಗಳಿಗೆ ಆಲೂರು ನಿಲ್ದಾಣದಲ್ಲಿದ್ದ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ನವೆಂಬರ್ 30 ರವರೆಗೆ ಮುಂದುವರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

error: Content is protected !!