ಗಾಂಧೀಜಿಯವರ ತತ್ವ-ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು

ಗಾಂಧೀಜಿಯವರ ತತ್ವ-ಆದರ್ಶಗಳನ್ನು  ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು

ಹರಪನಹಳ್ಳಿ ತಾಲ್ಲೂಕು ಆಡಳಿತದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಶಾಸಕರಾದ ಎಂ.ಪಿ. ಲತಾ ಮಲ್ಲಿಕಾರ್ಜುನ್‌

ಹರಪನಹಳ್ಳಿ, ಅ. 2 – ಸತ್ಯಾಗ್ರಹದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ತತ್ವ ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕರಾದ ಎಂ.ಪಿ. ಲತಾ ಮಲ್ಲಿಕಾರ್ಜುನ್‌ ಹೇಳಿದರು.

ಪಟ್ಟಣದ ಸರ್ಕಾರಿ ಜ್ಯೂನಿಯರ್ ಕಾಲೇಜಿನ ಗಾಂಧಿ ಮೆಮೋರಿಯಲ್ ಹಾಲ್‍ನ ಆವರಣದಲ್ಲಿ ಬುಧವಾರ ತಾಲ್ಲೂಕು ಆಡಳಿತ ಆಯೋಜಿಸಿದ್ದ ಮಹಾತ್ಮಾ ಗಾಂಧೀಜಿ ಹಾಗೂ ಲಾಲು ಬಹದ್ದೂರ್ ಶಾಸ್ತ್ರೀಜಿಯವರ ಜಯಂತ್ಯೋತ್ಸವ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದೇಶದ ಉದ್ದಗಲಕ್ಕೂ ಫಕ್ಕೀರನಂತೆ ಸಂಚರಿಸಿ ಬ್ರಿಟೀಷರ ವಿರುದ್ಧ ಉಪವಾಸ ಸೇರಿದಂತೆ ಅನೇಕ ಚಳುವಳಿಗಳನ್ನು ಮಾಡಿ ಗಾಂಧೀಜಿಯವರು ನಮಗೆ ಮಾದರಿಯಾದರು ಎಂದು ಹೇಳಿದರು.

ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಗಾಂಧೀಜಿಯವರು ಹೆಜ್ಜೆ ಗುರುತು ಬಿಟ್ಟು ಹೋಗಿದ್ದಾರೆ. ಅವರು ಹರಪನಹಳ್ಳಿ ಜ್ಯೂನಿಯರ್ ಕಾಲೇಜಿನಲ್ಲಿ ತಂಗಿದ್ದ ಕೊಠಡಿಯಲ್ಲಿ ಅವರ ಏಕಶಿಲೆ ಮೂರ್ತಿಯನ್ನು ನಿರ್ಮಾಣ ಮಾಡಿರುವುದು ಏಷ್ಯಾದಲ್ಲೇ ಮೊದಲು ಎಂದ ಅವರು, ಗಾಂಧಿ ಮೆಮೋರಿಯಲ್ ಹಾಲ್‌ ಐತಿಹಾಸಿಕ ತಾಣವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಮಾತನಾಡಿ, ಗಾಂಧೀಜಿಯವರು ದೇಶದ ಜನರನ್ನು ಒಗ್ಗೂಡಿಸಿ ಸತ್ಯ-ಅಹಿಂಸೆ ಮೂಲಕ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ಚೇತನ ಎಂದು ಹೇಳಿದರು.

ದಕ್ಷಿಣ ಆಫ್ರಿಕಾದಲ್ಲಿದ್ದ ಜನಾಂಗೀಯ ಬೇಧವನ್ನು ಖಂಡಿಸಿದರು. ಹೆಣ್ಣು-ಗಂಡು ಎಂಬ ಭೇದವನ್ನು ತಳ್ಳಿ ಹಾಕಿದರು. ಸ್ವಾತಂತ್ರ್ಯ ಹೋರಾಟದ ಜೊತೆಜೊತೆಗೆ ಮೌಢ್ಯಗಳನ್ನು ವಿರೋಧಿಸಿ ಸಾಮಾಜಿಕ ಬದಲಾವಣೆ ಬಯಸಿದ್ದರು ಎಂದು ಹೇಳಿದರು.

ಶಿಕ್ಷಕಿ ಶ್ವೇತಾ ಜಿ.ವಿಶೇಷ ಉಪನ್ಯಾಸ ನೀಡಿದರು.  ಪುರಸಭ ಸದಸ್ಯರಾದ ಎಂ.ವಿ. ಅಂಜಿನಪ್ಪ, ಅಬ್ದುಲ್ ರೆಹಮಾನ್, ಲಾಟಿ ದಾದಾಪೀರ್, ಟಿ.ವೆಂಕಟೇಶ, ಎಸ್. ಜಾಕೀರ್‌ ಹುಸೇನ್, ಉದ್ದಾರ ಗಣೇಶ, ಮಂಜುನಾಥ ಇಜಂತಕರ್, ಭೀಮವ್ವ, ಸಣ್ಣಹಾಲಪ್ಪ, ಭರತೇಶ, ಕೊಟ್ರೇಶ, ಹನುಮಕ್ಕ ಚಿಕ್ಕೇರಿ ಬಸಪ್ಪ, ಸತ್ತೂರು ಯಲ್ಲಮ್ಮ, ತಹಶೀಲ್ದಾರ್ ಬಿ.ವಿ. ಗಿರೀಶ್ ಬಾಬು, ತಾ.ಪಂ ಇಒ ವೈ.ಎಚ್.ಚಂದ್ರಶೇಖರ್‌, ಪುರಸಭೆ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಗಂಗಪ್ಪ, ಬಿಇಒ ಎಚ್.ಲೇಪಾಕ್ಷಪ್ಪ, ಕೃಷಿ ಅಧಿಕಾರಿ ಉಮೇಶ, ಸಿಡಿಪಿಒ ಅಶೋಕ, ಮುಖಂಡರಾದ ಕೆ.ಕುಬೇರಪ್ಪ, ಇಸ್ಮಾಯಿಲ್ ಎಲಿಗಾರ, ಜಾವೀದ್, ಸೈಯದ್ ಇರ್ಫಾನ್ ಛಲವಾದಿ ಪರಶುರಾಮ, ಗಿರಜ್ಜಿ ಮಂಜುನಾಥ್ ಸೇರಿದಂತೆ ಇತರರು ಇದ್ದರು.

error: Content is protected !!