ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಕಾಯ್ದಿರಿಸಿದ ಮತ್ತು ಕಾಯ್ದಿರಿಸದ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ಅವುಗಳ ಮಾಹಿತಿ ಈ ಕೆಳಗಿನಂತಿದೆ:
ರೈಲು ಸಂಖ್ಯೆ 07305/07306 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ರೈಲು:
ರೈಲು ಸಂಖ್ಯೆ 07305 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 10, 2024 ರಂದು ಎಸ್ಎಸ್ಎಸ್ ಹುಬ್ಬಳ್ಳಿಯಿಂದ 11:30 ಗಂಟೆಗೆ ಹೊರಟು, ಅದೇ ದಿನ ಯಶವಂತಪುರ 19:40 ಗಂಟೆಗೆ ತಲುಪಲಿದೆ.
ಈ ರೈಲು ಹಾವೇರಿ, ರಾಣೇಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ.
ರೈಲು ಸಂಖ್ಯೆ 07306 ಯಶವಂತಪುರ-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 10, 2024 ರಂದು ಯಶವಂತಪುರದಿಂದ 20:55 ಗಂಟೆಗೆ ಹೊರಟು, ಮರುದಿನ ಬೆಳಗಾವಿಗೆ 08:15 ಗಂಟೆಗೆ ತಲುಪಲಿದೆ.
ಈ ರೈಲು ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣೇಬೆನ್ನೂರು, ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ.
ರೈಲು ಸಂಖ್ಯೆ 07307/07308 ಬೆಳಗಾವಿ-ಮೈಸೂರು-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್‌ಪ್ರೆಸ್ ರೈಲು:
ರೈಲು ಸಂಖ್ಯೆ 07307 ಬೆಳಗಾವಿ-ಮೈಸೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 11, 2024 ರಂದು ಬೆಳಗಾವಿಯಿಂದ 17:30 ಗಂಟೆಗೆ ಹೊರಟು, ಮರುದಿನ ಮೈಸೂರಿಗೆ 06:25 ಗಂಟೆಗೆ ತಲುಪಲಿದೆ.
ಈ ರೈಲು ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಹಾವೇರಿ, ರಾಣೇಬೆನ್ನೂರು,
ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ಹಾಸನ, ಹೊಳೆ ನರಸೀಪುರ ಮತ್ತು ಕೃಷ್ಣರಾಜನಗರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ರೈಲು ಸಂಖ್ಯೆ 07308 ಮೈಸೂರು-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 12, 2024 ರಂದು ಮೈಸೂರಿನಿಂದ 22:30 ಗಂಟೆಗೆ ಹೊರಟು, ಮರುದಿನ ಎಸ್‌ಎಸ್‌ಎಸ್ ಹುಬ್ಬಳ್ಳಿಗೆ 07:00 ಗಂಟೆಗೆ ತಲುಪಲಿದೆ.
ಈ ರೈಲು ಕೃಷ್ಣರಾಜನಗರ, ಹೊಳೆ ನರಸೀಪುರ, ಹಾಸನ, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣೇಬೆನ್ನೂರು ಮತ್ತು ಹಾವೇರಿ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಈ ವಿಶೇಷ ರೈಲುಗಳು (07305/06 ಮತ್ತು 07307/08) 1 ಎಸಿ 2-ಟೈಯರ್, 1 ಎಸಿ 3-ಟೈಯರ್, 10 ಸ್ಲೀಪರ್ ಕ್ಲಾಸ್, 2 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಎಸ್ಎಲ್ಆರ್/ಡಿ ಬೋಗಿಗಳು ಸೇರಿದಂತೆ 16 ಬೋಗಿಗಳನ್ನು ಒಳಗೊಂಡಿರುತ್ತವೆ.
ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು ನಮ್ಮ ಸಹಾಯವಾಣಿ ಸಂಖ್ಯೆ 139ಗೆ ಸಂಪರ್ಕಿಸಿ ಅಥವಾ ವೆಬ್ ಸೈಟ್ www.enquiry.indianrail.gov.in.ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.