ದಾವಣಗೆರೆ, ಅ. 13- ಕಳೆದ 50-60 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ ಮತ್ತು ಈಗಲೂ ದುಡಿಯುತ್ತಿರುವ ನಿಷ್ಠಾವಂತ ಕಾರ್ಯಕರ್ತ ರಿದ್ದಾರೆ. ಆದರೂ ಇತ್ತೀಚಿಗೆ ಪಕ್ಷಕ್ಕೆ ವಲಸೆ ಬಂದ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ಥಾನಮಾನ ನೀಡುತ್ತಿರುವುದು ಖಂಡನೀಯ ಎಂದು ಗಾಂಧೀಜಿ ಹರಿಜನ ಯುವಕ ಸಂಘದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಕೆಪಿಸಿಸಿ ಎಸ್ಸಿ ವಿಭಾಗದ ಕಾರ್ಯದರ್ಶಿ ಸೋಮಲಾಪುರದ ಹನುಮಂತಪ್ಪ ಹೇಳಿದ್ದಾರೆ.
ಈ ಸಂಬಂಧ ಅವರು, ಆಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರೂ, ಶಾಸಕರೂ ಆದ ಡಾ. ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ ಪರಿಣಾಮ ಕಳೆದ ಬಾರಿ ಸರ್ಕಾರ ಸಂಪೂರ್ಣವಾಗಿ ಸೋತಿರುವುದು, ಎಲ್ಲರಿಗೂ ತಿಳಿದ ವಿಷಯವಾಗಿದೆ. ರಾಜ್ಯ ಸರ್ಕಾರದಲ್ಲಿ ನೂರಾರು ನಿಗಮ ಮಂಡಳಿಗಳಿದ್ದರೂ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸದೇ ಕಡೆಗಣಿಸಿರುವುದು ವಿಷಾದದ ಸಂಗತಿ. ನಾನು ಕೂಡ ಒಬ್ಬ ನಿಷ್ಠಾವಂತ ಕಾರ್ಯಕರ್ತ ನಿಗಮ ಮಂಡಳಿಗೆ ನೇಮಕ ಮಾಡುವಂತೆ ಒತ್ತಾಯಿಸಿದ್ದಾರೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಪುನೀತ್ ರಾಜಕುಮಾರ್ ಬಡಾವಣೆಯ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಮಂಜುನಾಥ್ ಕಲಘಟಗಿ, ಗಾಂಧೀಜಿ ಹರಿಜನ ಯುವಕ ಸಂಘದ ನಿರ್ದೇಶಕರಾದ ಗುಡದಪ್ಪ, ಅಜ್ಜಯ್ಯ, ಲಕ್ಕಪ್ಪ, ಅನಿಕೇತನ ಪೋಟೋ ಸ್ಟುಡಿಯೋ ಮಾಲೀಕರಾದ ಚಂದ್ರಶೇಖರ ತೆಗ್ಗಿನಮಠ ಮತ್ತಿತರರು ಇದ್ದರು.