ರಾಣೇಬೆನ್ನೂರು, ಅ.13- ಇನ್ನೂ ಕೆಲ ದಿನಗಳ ಕಾಲ ಗುಡುಗು, ಸಿಡಿಲು ಸಮೇತ ಮಳೆ ಬರಲಿದ್ದು ಇನ್ನು ಹೆಚ್ಚು ಪ್ರಮಾಣದಲ್ಲಿ ಬೆಳೆ ಹಾನಿಯಾಗುವ ಸಂಭವವಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಇದೇ ದಿನಾಂಕ 17ರ ನಂತರ ಬೆಳೆ ಹಾನಿ ಸರ್ವೇ ಮಾಡಲಾಗುತ್ತದೆ. ನಂತರ ಸರ್ಕಾರದಿಂದ ಪರಿಹಾರ ಕೊಡಿಸಲಾಗುವದು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಕಳೆದ ಮೂರು ದಿನಗಳಿಂದ ಗುಡುಗು, ಸಿಡಿಲಿನಿಂದ ಸುರಿದ ಮಳೆಯಿಂದಾಗಿ ತಾಲ್ಲೂಕಿನಲ್ಲಿ ಬೆಳೆ ಹಾನಿಯಾದ ಪ್ರದೇಶಗಳಿಗಿಂದು ಭೇಟಿ ನೀಡಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು.
ಇಂದು ಬೆಳೆ ಹಾನಿಯಾದ ಗ್ರಾಮಗಳಿಗೆ ಭೇಟಿ ನೀಡಿ ರೈತರಿಂದ ಮಾಹಿತಿ ಪಡೆಯುತ್ತಿದ್ದೇನೆ. ಅಧಿಕಾರಿಗಳು ಸಹ ಗ್ರಾಮಗಳಿಗೆ ತೆರಳಿ ಸದ್ಯದ ಪರಿಸ್ಥಿತಿಯ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಶಾಸಕರು ಹೇಳಿದರು.
ನೈಸರ್ಗಿಕ ವಿಕೋಪದಿಂದ ಜನರು ತೊಂದರೆ ಅನುಭವಿಸುವದನ್ನು ತಡೆಯುವ ಪ್ರಯತ್ನ ಮಾಡಲಾಗುವುದು ಎಂದು ಶಾಸಕರು ವಿವರಿಸಿದರು. ತಹಶಿಲ್ದಾರ ಭಾವನ, ಕೃಷಿ ಅಧಿಕಾರಿ ಶಾಂತಮಣಿ ಇತರರಿದ್ದರು.