ಮಲೇಬೆನ್ನೂರು, ಅ.13- ದಸರಾ ಹಾಗೂ ವಿಜಯದಶಮಿ ಹಬ್ಬದ ಅಂಗವಾಗಿ ಕೊಮಾರನಹಳ್ಳಿ ಗ್ರಾಮದ ಹೆಳವನಕಟ್ಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ಬ್ರಹ್ಮ ರಥೋತ್ಸವವು ಶನಿವಾರ ಬೆಳಗ್ಗೆ ಸಂಭ್ರಮದಿಂದ ಜರುಗಿತು. ಉಪ ತಹಸೀಲ್ದಾರ್ ಆರ್. ರವಿ ರಥಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.
ನಂತರ ಭಕ್ತರು `ಗೋವಿಂದ ಗೋವಿಂದಾ’ ಎಂಬ ಜಯಘೋಷದೊಂದಿಗೆ ರಥವನ್ನು ಎಳೆದು ಭಕ್ತಿ ಸಮರ್ಪಿಸಿದರು. ವಿವಿಧ ಕಲಾ ಮೇಳಗಳು ರಥೋತ್ಸವಕ್ಕೆ ಮೆರಗು ತಂದವು. ರಥೋತ್ಸವದ ನಂತರ ಭಕ್ತರಿಗೆ ಬನ್ನಿ ವಿತರಿಸಲಾಯಿತು. ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.