ದಾವಣಗೆರೆ, ಅ.13- ಎಸ್.ಎಸ್.ಎಲ್.ಸಿ ವಿಜ್ಞಾನ ವಿಷಯದ ಪ್ರಶ್ನೆ ಪತ್ರಿಕೆಯನ್ನು ಸರಳೀಕರಣಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಪ್ರೌಢಶಾಲಾ ವಿಜ್ಞಾನ ಶಿಕ್ಷಕರ ವೇದಿಕೆಯು ಡಿಡಿಪಿಐ ಜಿ. ಕೊಟ್ರೇಶ್ ಹಾಗೂ ಡಯಟ್ ಪ್ರಾಚಾರ್ಯರಾದ ಗೀತಾ ಅವರಿಗೆ ಮನವಿ ಸಲ್ಲಿಸಿತು. ಮೂಲ ವಿಜ್ಞಾನದ ಉಳಿವಿನ ಆರಂಭವು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಂದ ಆಗಬೇಕಿದೆ. ಹಾಗಾಗಿ ಈ ಹಂತದಲ್ಲಿ ಓದುವ ಮಕ್ಕಳಿಗೆ ವಿಜ್ಞಾನದ ಬಗೆಗೆ ಆಸಕ್ತಿ ಮೂಡಿಸುವುದು ಬಹಳ ಮುಖ್ಯ. ಹಾಗಾಗಿ ಇದಕ್ಕೆ ಪೂರಕವಾಗಿ ಪ್ರಶ್ನೆ ಪತ್ರಿಕೆಯ ಸ್ವರೂಪ ಬದಲಾವಣೆ ಪ್ರಮುಖ ಹೆಜ್ಜೆಯಾಗಿದೆ ಎಂದು ಮನವಿ ಮಾಡಿದ್ದಾರೆ.
ಈ ವೇಳೆ ವೇದಿಕೆಯ ಜಿಲ್ಲಾಧ್ಯಕ್ಷ ಡಿ.ಜಿ. ರಾಮಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಎಂ.ಎನ್. ಶ್ರೀಧರಮಯ್ಯ, ಖಜಾಂಚಿ ವೈ. ರುದ್ರಪ್ಪ ಮತ್ತಿತರರಿದ್ದರು.