ದಾವಣಗೆರೆ, ಅ. 13 – ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲೆಂದು ಇಂದು ನಗರಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿಯೂ ಆದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ದಿ. ಟಿ. ದಾಸಕರಿಯಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ದಾಸಕರಿಯಪ್ಪ ಅವರು ಪಕ್ಷದಲ್ಲಿ ಸಮಾಜಕ್ಕೆ ಸಲ್ಲಿಸಿದ ಸೇವೆಯನ್ನು ಮೆಲಕು ಹಾಕಿದ ಕುಮಾರಸ್ವಾಮಿ ಅವರು ದಾಸಕರಿಯಪ್ಪ ಅವರ ಪತ್ನಿ ಮತ್ತು ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಗಣೇಶ್ ದಾಸಕರಿಯಪ್ಪ ಮತ್ತು ಕುಟುಂಬ ಪರಿವಾರದವರು ಕುಮಾರಸ್ವಾಮಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಬೀಳ್ಕೊಟ್ಟರು.
January 10, 2025