ಇಳಕಲ್ ಮಹಾಂತೇಶ್ ಅವರಿಗೆ `ಶ್ರೀ ಶಿವಕುಮಾರ ಪ್ರಶಸ್ತಿ’

ಇಳಕಲ್ ಮಹಾಂತೇಶ್ ಅವರಿಗೆ  `ಶ್ರೀ ಶಿವಕುಮಾರ ಪ್ರಶಸ್ತಿ’

ಸಾಣೇಹಳ್ಳಿ, ಅ.18- ಇಲ್ಲಿನ ಶ್ರೀ ಶಿವಕುಮಾರ ಕಲಾಸಂಘವು  ರಂಗಭೂಮಿಗೆ ಸಲ್ಲಿಸಿದ ಜೀವಮಾನದ ಕೊಡುಗೆಯನ್ನು ಪರಿಗಣಿಸಿ ಪ್ರತಿವರ್ಷ ಕೊಡಮಾಡುವ ಪ್ರತಿಷ್ಠಿತ `ಶ್ರೀ ಶಿವಕುಮಾರ ಪ್ರಶಸ್ತಿ’ಗೆ ಈ ಬಾರಿ  ಇಳಕಲ್ಲಿನ ಹಿರಿಯ ರಂಗಕರ್ಮಿ, ರಂಗಸಂಘಟಕ, ಕಲಾವಿದ, ಕಲಾನಿರ್ದೇಶಕ ಮಹಾಂತೇಶ್ ಎಂ ಗಜೇಂದ್ರಘಡ  ಅವರನ್ನು ಆಯ್ಕೆ ಮಾಡಿದೆ ಎಂದು ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ. 

2004 ರಿಂದ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮಿಗಳವರ ಹೆಸರಿನಲ್ಲಿ ಶ್ರೀ ಶಿವಕುಮಾರ ಪ್ರಶಸ್ತಿಯನ್ನು ಕಲಾಸಂಘವು ಕೊಡುತ್ತಾ ಬಂದಿದೆ. ರಂಗಭೂಮಿ, ರಂಗ ಚಟುವಟಿಕೆ ಗಳಲ್ಲಿ, ಮಹತ್ವದ ಸಾಧನೆ ಮಾಡಿದ ಹಿರಿಯ ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡುತ್ತಿದೆ. 

ಪ್ರಶಸ್ತಿಯು 50 ಸಾವಿರ ರೂ. ನಗದು ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿದ್ದು, ಪ್ರಶಸ್ತಿಯನ್ನು ಬರುವ ನವೆಂಬರ್ 4 ರಿಂದ 9 ರವರೆಗೆ ಸಾಣೇಹಳ್ಳಿಯಲ್ಲಿ ನಡೆಯುವ ರಾಷ್ಟ್ರೀಯ ನಾಟಕೋತ್ಸವ’ದ ಸಮಾರೋಪ ಸಮಾರಂಭದ ದಿನ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

error: Content is protected !!