ಪಾಲಿಕೆಯ ಪ್ರಗತಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ

ಪಾಲಿಕೆಯ ಪ್ರಗತಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ

ದಾವಣಗೆರೆ, ಅ.21- ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನಾ ಸಭೆಯು ಇಂದು ಸಂಜೆ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಜಿಲ್ಲಾಧಿಕಾರಿ  ಡಾ. ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿಗಳು 15ನೇ ಹಣಕಾಸು ಆಯೋಗo ಅನುದಾನ, ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ, ಸ್ವಚ್ಛ ಭಾರತ ಮಿಷನ್ ಇತ್ಯಾದಿ ಅನುದಾನಗಳಡಿ ಕೈಗೊಂಡ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು. 

ಸಾರ್ವಜನಿಕರಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಸರಬರಾಜು ಮಾಡಲು ನೀರು ಸರಬರಾಜು ಇಂಜಿನಿಯರ್‌ಗಳಿಗೆ ನಿರ್ದೇಶನ ನೀಡಿದರು. ಕಂದಾಯ ಶಾಖೆಯ ಪ್ರಗತಿಯನ್ನು ಪರಿಶೀಲಿಸಿ ಇ-ಆಸ್ತಿ ಕೋರಿ ಬಂದ ಅರ್ಜಿಗಳನ್ನು ನಿಗದಿತ ಅವಧಿಯೊಳಗಾಗಿ ವಿಲೇಪಡಿಸಲು ಕಂದಾಯ ಶಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಆಸ್ತಿ ತೆರಿಗೆ, ನೀರಿನ ತೆರಿಗೆಯನ್ನು ಹೆಚ್ಚಿನ ಪ್ರಮಾಣದಲ್ಲಿ ವಸೂಲಿ ಮಾಡಲು ಸೂಚಿಸಿದರು. ಉದ್ದಿಮೆ ಪರವಾನಿಗೆ ನೀಡಿಕೆ ಮತ್ತು ಶುಲ್ಕ ವಸೂಲಾತಿಯನ್ನು ಪರಿಶೀಲಿಸಿದರು.

ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕ ಉಪಸ್ಥಿತರಿದ್ದರು.

error: Content is protected !!