ಕೊಮಾರನಹಳ್ಳಿ ಕೆರೆ ಕೋಡಿ ವೀಕ್ಷಣೆ

ಕೊಮಾರನಹಳ್ಳಿ ಕೆರೆ ಕೋಡಿ ವೀಕ್ಷಣೆ

ಮಲೇಬೆನ್ನೂರು, ಅ.20- ಭರ್ತಿಯಾಗಿ ಕೋಡಿ ಬಿದ್ದಿರುವ ಕೊಮಾರನಹಳ್ಳಿಯ ಹೆಳವನಕಟ್ಟೆ ಲಕ್ಷ್ಮೀ ರಂಗನಾಥ ಸ್ವಾಮಿಯ 97 ಎಕರೆ ವಿಸ್ತೀರ್ಣದ ಐತಿಹಾಸಿಕ ಕೆರೆ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಶಿವಮೊಗ್ಗ ಹೆದ್ದಾರಿ ಪಕ್ಕದಲ್ಲಿರುವ ಈ ಕೆರೆ ಸಾಗರದಂತೆ ಕಾಣುತ್ತಿದ್ದು, ಪ್ರಯಾಣಿಕರ ಕಣ್ಮನ ಸೆಳೆಯುತ್ತಿದೆ. ಕಳೆದ 3-4 ದಿನಗಳಿಂದ ಸುರಿದ ಮಳೆಯಿಂದಾಗಿ ಕೆರೆ ಕೋಡಿ ಮೂಲಕ ಅಪಾರ ಪ್ರಮಾಣದ ನೀರು ಹೊರ ಹೋಗುತ್ತಿದ್ದು, ಇದನ್ನು ಶುಕ್ರವಾರ ಜಿ.ಪಂ ಮಾಜಿ ಸದಸ್ಯರಾದ ಬೆಣ್ಣೆಹಳ್ಳಿ ಹಾಲೇಶಪ್ಪ, ಬಿ.ಎಂ.ವಾಗೀಶ್ ಸ್ವಾಮಿ ಮತ್ತು ಎಪಿಎಂಸಿ ಮಾಜಿ ಅಧ್ಯಕ್ಷ ಜಿ.ಮಂಜುನಾಥ್ ಪಟೇಲ್ ವೀಕ್ಷಿಸಿದರು.

ಕೆರೆಗೆ ಇಂದು ಬಾಗಿನ : ಭರ್ತಿಯಾಗಿ ಕೋಡಿ ಬಿದ್ದಿರುವ ಕೊಮಾರನಹಳ್ಳಿಯ ಹೆಳವನಕಟ್ಟೆ ಲಕ್ಷ್ಮೀ ರಂಗನಾಥ ಸ್ವಾಮಿಯ 97 ಎಕರೆ ವಿಸ್ತೀರ್ಣದ ಐತಿಹಾಸಿಕ ಕೆರೆಗೆ ಇಂದು ಬೆಳಗ್ಗೆ 9.30 ಕ್ಕೆ ಶಾಸಕ ಬಿ.ಪಿ.ಹರೀಶ್ ಅವರು ಬಾಗಿನ ಅರ್ಪಿಸಲಿದ್ದಾರೆ.

error: Content is protected !!