ಜಿಲ್ಲಾ ಲಿಂಗಾಯತ ಪಂಚಮಸಾಲಿ ಸಮಾಜದಿಂದ ರಾಷ್ಟ್ರಮಾತೆ ವೀರರಾಣಿ ಕಿತ್ತೂರು ಚೆನ್ನಮ್ಮನವರ 200ನೇ ವಿಜಯೋತ್ಸವ ಹಾಗೂ 246ನೇ ಜಯಂತ್ಯೋತ್ಸವದ ಪ್ರಯುಕ್ತ ಬೈಕ್ ರಾಲಿ ಹಮ್ಮಿಕೊಳ್ಳಲಾಗಿದೆ. ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್ ಬೈಕ್ ರಾಲಿಗೆ ಚಾಲನೆ ನೀಡಲಿದ್ದು, ಮಹಾನಗರ ಪಾಲಿಕೆ ಸದಸ್ಯ ಬಿ.ಜಿ. ಅಜಯ್‌ಕುಮಾರ್ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ. ಬೆಳಿಗ್ಗೆ 9.30ಕ್ಕೆ ಎಸ್.ಎಸ್. ಹಾಸ್ಪಿಟಲ್ ಹಿಂಭಾಗ ಗಾಂಧಿ ಭವನದಿಂದ ಕುವೆಂಪು ಕನ್ನಡ ಭವನದವರೆಗೆ ಬೈಕ್ ರಾಲಿ ಹಮ್ಮಿಕೊಳ್ಳಲಾಗಿದ್ದು, ಕುವೆಂಪು ಕನ್ನಡ ಭವನದಲ್ಲಿ ಬೆಳಿಗ್ಗೆ 11.30ಕ್ಕೆ ಕಾರ್ಯಕ್ರಮ ನಡೆಯಲಿದೆ.
January 27, 2025