ದಾವಣಗೆರೆ, ಅ.31- ನಗರದ ಚಾಣಕ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಬ್ಯಾಸ್ಕೆಟ್ ಬಾಲ್ ಹಾಗೂ ನೆಟ್ ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತರಬೇತುದಾರ ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಮನ್ವಿತ ಮಸ್ತಿ, ವರ್ಧಿನಿ, ಪೂಜಾ, ಶಾಂತಿ ಬಾಯಿ, ಕಾವ್ಯ, ನವ್ಯ, ಚಂದನ ಮತ್ತು ಗೌರಿ ಉತ್ತಮ ಸಾಧನೆ ಮಾಡಿದ್ದಾರೆ.
December 6, 2024