ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಎಸ್. ಸಿದ್ದಬಸಪ್ಪ
ರಾಣೇಬೆನ್ನೂರು, ನ.5- ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯವು ಆರ್ಥಿಕ ದಿವಾಳಿಯತ್ತ ಸಾಗುವಂತಾಗಿದೆ. ಇದನ್ನರಿತ ಮತದಾರರು ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಎಸ್. ಸಿದ್ದಬಸಪ್ಪ ಯಾದವ್ ಹೇಳಿದರು. ಮಂಗಳವಾರ ನಗರದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಮೂರು ಕ್ಷೇತ್ರಗಳ ಪೈಕಿ ರಾಜ್ಯದ ಗಮನ ಸೆಳೆದಿರುವ ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿಯವರು ನಿರೀಕ್ಷೆಗೂ ಮೀರಿ ದಾಖಲೆ ಪ್ರಮಾಣದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದರು. ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟದಲ್ಲಿ ಬಿಜೆಪಿ ಅಭ್ಯರ್ಥಿಗಳು ಅಭೂತಪೂರ್ವ ಜಯವನ್ನು ಸಾಧಿಸಲಿದ್ದಾರೆ. ಸಿದ್ದರಾಮಯ್ಯ ನವರು ಅಧಿಕಾರದ ದುರಾಸೆಯಿಂದ ಗ್ಯಾರಂಟಿ ಯೋಜನೆಗಳ ಆಮಿಷದ ಮೂಲಕ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣೆ ಹಿಡಿದು ರಾಜ್ಯವನ್ನು ಆರ್ಥಿಕವಾಗಿ ದಿವಾಳಿಯತ್ತ ಕೊಂಡೊಯ್ಯುತ್ತಿದ್ದಾರೆ ಎಂದು ಯಾದವ್ ಕಿಡಿಕಾರಿದರು.