ದಾವಣಗೆರೆ, ನ. 6 – ನಗರದ ಎಸ್.ಎ.ಎಸ್. ಎಸ್ ಯೋಗ ಕೇಂದ್ರದ ಶ್ರೀಮತಿ ಎಸ್.ಪಿ. ಲಾವಣ್ಯ ಶ್ರೀಧರ್ ಅವರಿಗೆ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪುರಸ್ಕಾರ ಲಭಿಸಿದೆ. ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್, ಜಿಲ್ಲಾಧಿಕಾರಿ ಡಾ. ಜಿ.ಎಂ. ಗಂಗಾಧರಸ್ವಾಮಿ, ಎಸ್.ಪಿ. ಶ್ರೀಮತಿ ಉಮಾ ಪ್ರಶಾಂತ್, ಮೇಯರ್ ಚಮನ್ ಸಾಬ್, ಮಾಯಕೊಂಡ ಶಾಸಕ ಬಸವಂತಪ್ಪ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
December 22, 2024