ಕೊಟ್ಟೂರು, ನ.7- ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಮಂಡಳಿಗೆ ಸರ್ಕಾರದಿಂದ ನಾಮ ನಿರ್ದೇಶಿತರಾದ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ನಿರ್ದೇಶಕರು ಬುಧವಾರ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.
ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಹರಾಳು ಗ್ರಾಮದ ಎ.ನಂಜಪ್ಪ, ಉಪಾಧ್ಯಕ್ಷರಾಗಿ ಕೊಟ್ಟೂರಿನ ಎಂ. ಶಿವಣ್ಣ ಸೇರಿದಂತೆ, ಶಿರಿಬಿ ಕೊಟ್ರೇಶ್, ಎಂ.ಓ. ಕೊಟ್ರಯ್ಯ ಹಾಗೂ ಇತರೆ 15 ನಿರ್ದೇಶಕರೊಂದಿಗೆ ಅಧಿಕಾರ ವಹಿಸಿಕೊಂಡರು.
ಎಪಿಎಂಸಿ ಕಾರ್ಯದರ್ಶಿ ಎಚ್.ಕೆ.ವೀರಣ್ಣ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಐ. ಎಂ. ದಾರುಕೇಶ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಡಕಿ ಮಂಜುನಾಥ್ ಸೇರಿದಂತೆ ಅನೇಕ ಮುಖಂಡರುಗಳು ಹಾಜರಿದ್ದರು.