ಎಸ್.ಎಸ್.ಕನ್ವೆನ್ಷನ್ ಹಾಲ್ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮದುವೆ ಮತ್ತು ಶುಭ ಕಾರ್ಯಗಳಿಗೆ ಮೆರಗು ನೀಡುವ ವಿನೂತನ ಆಭರಣ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ.
ದೇಶದ 30 ಅಗ್ರ ಶ್ರೇಣಿಯ ಹೆಸರಾಂತ ಆಭರಣ ತಯಾರಕರು ಈ ಮೇಳದಲ್ಲಿ ಭಾಗವಹಿಸುತ್ತಿರುವುದು ವಿಶೇಷ. ಅಮೋಘವಾದ ಭಾರತೀಯ ಒಡವೆಗಳ ಈ ಉತ್ಸವವು ನಡೆಯಲಿದ್ದು, ಇಂದು ಮಧ್ಯಾಹ್ನ 12.30ಕ್ಕೆ ಜನಪ್ರಿಯ ನಟಿ ಆರಾಧನಾ ಮೇಳವನ್ನು ಉದ್ಘಾಟಿಸುವರು.
ಈ ಮೇಳವನ್ನು ಗೋಲ್ಡನ್ ಕ್ರೀಪರ್ ಸಂಸ್ಥೆಯ ಬಿ.ಎನ್.ಜಗದೀಶ್ ಮತ್ತು ಹೇಮಲತಾ ಜಗದೀಶ್ ಆಯೋಜಿಸಿದ್ದಾರೆ.
ಅಂತರರಾಷ್ಟ್ರೀಯ ಗುಣಮಟ್ಟದ ಚಿನ್ನಾಭರಣ ಮತ್ತು ವಜ್ರಾಭರಣಗಳ ಬಗ್ಗೆ ಇಲ್ಲಿ ಉಚಿತ ಮಾಹಿತಿ ಪಡೆಯುವುದರ ಜೊತೆಗೆ, ಖರೀದಿದಾರರು ಹಳೇ ಚಿನ್ನವನ್ನು ಬದಲಾಯಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ. ಮುಖ್ಯವಾಗಿ ಈ ಮೇಳದ ನಂತರವೂ ಗ್ರಾಹಕರಿಗೆ ಆಭರಣಗಳಿಗೆ ಸಂಬಂಧಿಸಿದ ಸೇವೆಗಳನ್ನು ಒದಗಿಸಲಾಗುವುದು ಎಂದು ಜಗದೀಶ್ ತಿಳಿಸಿದ್ದಾರೆ.