ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಪರ ಮಾಜಿ ಸಂಸದ ಸಿದ್ದೇಶ್ವರ ಪ್ರಚಾರ

ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಪರ  ಮಾಜಿ ಸಂಸದ ಸಿದ್ದೇಶ್ವರ ಪ್ರಚಾರ

ದಾವಣಗೆರೆ, ನ.8- ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ  ಉಪಚುನಾವಣೆ ಪ್ರಯುಕ್ತ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಪರ ಮಾಜಿ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಜಿ.ಎಂ. ಸಿದ್ದೇಶ್ವರ ಅವರು ಇಂದು ಮತ ಯಾಚನೆ ಮಾಡಿದರು.

ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ದುರಾಡಳಿತದಿಂದ ಜನರೂ ಸಾಕಷ್ಟು ನೊಂದಿದ್ದು, ಕಾಂಗ್ರೆಸ್ಸಿನ ಸರ್ಕಾರಕ್ಕೆ ಶಾಪವನ್ನು ಹಾಕುತ್ತಿದ್ದಾರೆ. ಇಂತಹ ಭ್ರಷ್ಟ ಮತ್ತು ಕೆಟ್ಟ ಆಡಳಿತ ಸರ್ಕಾರವನ್ನು ಎಂದೂ ನೋಡಿಲ್ಲವೆಂದರು ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವಂತೆ ಕ್ಷೇತ್ರದ ಜನರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್ ಆರ್. ನಿರಾಣಿ ಹಾಗೂ ಇತರರು ಉಪಸ್ಥಿತರಿದ್ದರು.

error: Content is protected !!