ದಾವಣಗೆರೆ, ನ.12- ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣ ಪತ್ತೆ ಹೆಚ್ಚಿ ವಶ ಪಡಿಸಿಕೊಂಡಿದ್ದ ಸ್ವತ್ತನ್ನು ಪೊಲೀಸರು ಮರಳಿ ವಾರಸುದಾರರಿಗೆ ಒಪ್ಪಿಸಿದ್ದಾರೆ. ಪ್ರಕಾಶ್ ಪಿ. ಅವರಿಗೆ ಸೇರಿದ್ದ 3.24 ಲಕ್ಷ ರೂ. ಬೆಲೆಯ 63 ಗ್ರಾಂ. ಬಂಗಾರದ ಆಭರಣಗಳನ್ನು ಮಂಗಳವಾರ ಮರಳಿ ನೀಡಲಾಯಿತು. ಈ ಸಂಧರ್ಭದಲ್ಲಿ ನಗರ ಪೊಲೀಸ್ ಉಪಾಧೀಕ್ಷಕರಾದ ಮಲ್ಲೆಶ್ ದೊಡ್ಮನಿ, ಕೆಟಿಜೆ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ್, ಪಿಎಸ್ ಐ ಲತಾ ರವರು ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು
January 23, 2025